ಕಾರವಾರ :ರಾಜ್ಯ ಚುನಾವಣೆಯಲ್ಲಿ ಭಟ್ಕಳದಲ್ಲಿ (Bhatkal) ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಮುಸ್ಲಿಂ ಯುವಕರು ಇಸ್ಲಾಂ ಧ್ವಜ (Islam Flag) ಹಿಡಿದು ಸಂಭ್ರಮಿಸಿದ್ದಲ್ಲದೆ, ಕೇಸರಿ ಧ್ವಜದ ಪಕ್ಕ ಅದನ್ನು ಅಳವಡಿಸಿದ್ದಾರೆ. ಭಟ್ಕಳ ಸಂಶುದ್ದಿನ್ ಸರ್ಕಲ್ ಮೇಲೆ ನಿಂತು ಕೇಸರಿ ಭಾವುಟ ಪಕ್ಕದಲ್ಲಿ ಇಸ್ಲಾಂ ಬಾವುಟ ಹಾರಿಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದ್ದು, ಆಕ್ರೋಶ ವ್ಯಕ್ತವಾಗಿದೆ.
ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ, ಬಿಜೆಪಿಯ ಸುನೀಲ್ ನಾಯ್ಕ ವಿರುದ್ಧ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಮಂಕಾಳು ವೈದ್ಯ ಗೆಲುವನ್ನ ಸಂಭ್ರಮಿಸುವ ವೇಳೆ ಭಟ್ಕಳ ಪಟ್ಟಣದಲ್ಲಿರುವ ಸಂಶುದ್ದೀನ್ ವೃತ್ತದ ಮೇಲೇರಿದ ಮುಸ್ಲಿಂ ಯುವಕರು ಕೇಸರಿ ಧ್ವಜದ ಪಕ್ಕ ನಿಂತು ಇಸ್ಲಾಂ ಧ್ವಜ ಪ್ರದರ್ಶನ ಮಾಡಿದ್ದಾರೆ.
ಕಾಂಗ್ರೆಸ್ಗೆ ಬಹುಮತ ಬಂದಿದ್ದೇ ತಡ, ಇದರ ಸಂತೋಷಕ್ಕೆ ಭಟ್ಕಳದಲ್ಲಿ ಇಸ್ಲಾಂ ಧ್ವಜ ಹಾರಿಸಲಾಗಿದೆ. ಅಲ್ಲದೇ, ಸಾಮಾಜಿಕ ಜಾಲತಾಣದಲ್ಲಿ ಸಮಾಜಘಾತುಕ ಸಂದೇಶಗಳನ್ನು ರವಾನಿಸಲಾಗುತ್ತಿದೆ. “ಹಿಂದೂಗಳ ಹೆಣ ಎತ್ತಲೂ ಯಾರೂ ಇರಬಾರದು. ಕರ್ನಾಟಕದಲ್ಲಿ ಇನ್ನು ಮುಂದೆ ಮುಸ್ಲಿಂ ಹವಾ, ಅಲ್ಲಾಹು ಅಕ್ಬರ್” ಮುಸ್ಲಿಂ ಯುವಕನೊಬ್ಬ ಮಾಡಿದ ಕಾಮೆಂಟ್ನ ಸ್ಕ್ರೀನ್ಶಾಟ್ ವಾಟ್ಸ್ ಆ್ಯಪ್ ಗಳಲ್ಲಿ ಹರಿದಾಡುತ್ತಿದ್ದು, ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.