ಉಡುಪಿ: ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಕಿರಣ್ ಕುಮಾರ್ ಕೊಡ್ಗಿ (Kiran Kumar Kodgi) ಭರ್ಜರಿ ಗೆಲುವು ಸಾಧಿಸಿದ್ದಾರೆ.
ಹಾಲಾಡಿ ಶ್ರೀನಿವಾಸ ಶೆಟ್ಟಿ (Halady Srinivas Shetty) ತ್ಯಾಗ ಮಾಡಿದ್ದ ಕ್ಷೇತ್ರದಲ್ಲಿ ಕಿರಣ್ ಕುಮಾರ್ ಸ್ಪರ್ಧೆ ಮಾಡಿದ್ದರು. ಕಾಂಗ್ರೆಸ್‌ನಿಂದ ಮೊಳಹಳ್ಳಿ ದಿನೇಶ್ ಹೆಗ್ಡೆ ಸ್ಪರ್ಧಿಸಿದ್ದರು. ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರದ ವಾಜಪೇಯಿ ಎಂದೇ ಕರೆಯಿಸಿಕೊಳ್ಳುತ್ತಿದ್ದರು. 25 ವರ್ಷಗಳ ಕಾಲ ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರದ ಶಾಸಕರಾಗಿದ್ದರು. ಈ ಬಾರಿ ಕೂಡ ಹಾಲಾಡಿ ಶ್ರೀನಿವಾಸ ಶೆಟ್ಟಿ ತನ್ನ ಕೊನೆಯ ಚುನಾವಣೆಯನ್ನು ಎದುರಿಸುತ್ತಾರೆ ಎಂಬ ಮಾತುಗಳಿದ್ದವು. ಆದರೆ ಹಾಲಾಡಿ ಶ್ರೀನಿವಾಸ ಶೆಟ್ಟಿ, ರಾಜಕೀಯ ನಿವೃತ್ತಿ ಘೋಷಿಸಿದ್ದರು.
ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿದ್ದ ಎ.ಜಿ ಕೊಡ್ಗಿ ರಾಜಕೀಯಕ್ಕೆ ಕರೆದುಕೊಂಡು ಬಂದಿದ್ದರು. ಆರಂಭದ ಎರಡು ಅವಧಿಗಳಲ್ಲಿ ಹಾಲಾಡಿಯ ಗೆಲುವಿನ ಹಿಂದೆ ಕೊಡ್ಗಿ ಬೆಂಬಲ ಇತ್ತು. ಗುರುವಿನ ಋಣ ತೀರಿಸಲು ಎ ಜಿ ಕೊಡ್ಗಿ (AG Kodgi) ಅವರ ಪುತ್ರ ಕಿರಣ್ ಕೊಡ್ಗಿ ಅವರಿಗೆ ಈ ಬಾರಿ ಕುಂದಾಪುರದ ಟಿಕೆಟ್ ಸಿಗುವಂತೆ ಮಾಡಿದ್ದರು. ಸದ್ಯ ಅವರು ಗೆಲುವು ಸಾಧಿಸಿದ್ದರು.