Kornersite

Just In National

Accident: ಭೀಕರ ಅಪಘಾತ; 6 ಜನ ಸಾವು!

ಟ್ರಕ್ ಹಾಗೂ ಪಿಕಪ್ ವ್ಯಾನ್ ನಡುವೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಘಟನೆಯಲ್ಲಿ 6 ಜನ ಸಾವನ್ನಪ್ಪಿ, 25ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ.

ಘಟನೆಯಲ್ಲಿ ಮಗು ಸೇರಿದಂತೆ 6 ಜನ ಸಾವನ್ನಪ್ಪಿದ್ದಾರೆ. ಬಲೋದಬಜಾರ್ ರಾಷ್ಟ್ರೀಯ ಹೆದ್ದಾರಿಯ ಗೋದಾ ಪುಲಿಯಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ.

ಅಪಘಾತದ ಸಮಯದಲ್ಲಿ ಪಿಕಪ್ ವ್ಯಾನ್ ಸುಮಾರು 30 ಪ್ರಯಾಣಿಕರನ್ನು ಸಾಗಿಸುತ್ತಿತ್ತು. ಮೃತರಲ್ಲಿ ಐವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಸದ್ಯ ಗಾಯಾಳುಗಳು ಬಲೋದಬಜಾರ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಲಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

You may also like

National

ರಾಮಲೀಲಾ ಮೈದಾನದಲ್ಲಿ ಜಮಾಯಿಸುತ್ತಿರುವ ರೈತರು

ನವದೆಹಲಿ : ದೇಶದ ಬೇರೆ ಬೇರೆ ರಾಜ್ಯಗಳಿಂದ ರೈತರು ಇಂದು ದೆಹಲಿಯಲ್ಲಿ ಜಮಾಯಿಸುತ್ತಿದ್ದಾರೆ. ವಿವಿಧ ರೈತ ಸಂಘಟನೆಗಳ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೃಷಿ ಉತ್ಪನ್ನಗಳ ಕನಿಷ್ಠ
Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ