Kornersite

Bengaluru Just In Karnataka Politics State

Congress: ದೆಹಲಿಯಲ್ಲಿ ಸಿಎಂ ಪಟ್ಟದ ಪಟ್ಟು; ಪ್ರಯಾಣ ಬೆಳೆಸಿದ ಸಿದ್ದು!

ಬೆಂಗಳೂರು ; ಸಿಎಂ ಸ್ಥಾನಕ್ಕೆ ಪ್ರಯತ್ನ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಆಯ್ಕೆಯ ಲಾಬಿಯನ್ನು ದೆಹಲಿ ಮಟ್ಟದಲ್ಲಿ ನಡೆಸಲು ತೀರ್ಮಾನಿಸಿದ್ದಾರೆ. ಮೇ 13ರ ಫಲಿತಾಂಶದಲ್ಲಿ ಕಾಂಗ್ರೆಸ್ ಭರ್ಜರಿ ಜಯಸಾಧಿಸಿದೆ. 135 ಸ್ಥಾನಗಳನ್ನು ಗಳಿಸಿ ಪೂರ್ಣ ಪ್ರಮಾಣದ ಸರ್ಕಾರ ರಚಿಸುವ ಅವಕಾಶ ಸಿಕ್ಕಿದೆ.

ಹೀಗಾಗಿ 5 ವರ್ಷ ಸರಾಗ ಹಾಗೂ ಸುಲಲಿತವಾಗಿ ಸರ್ಕಾರ ನಡೆಸಿಕೊಂಡು ಸಾಗುವ ಅವಕಾಶ ಇರುವ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಸಂಘಟನೆ ಮಾಡಿರುವ ಡಿಕೆಶಿ ಹಾಗೂ ಹೆಚ್ಚಿನ ಶಾಸಕರ ಬೆಂಬಲ ಹೊಂದಿರುವ ಕಾರಣಕ್ಕೆ ಸಿದ್ದರಾಮಯ್ಯ ಸಿಎ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ. ಪಕ್ಷದಲ್ಲಿ 10ಕ್ಕೂ ಅಧಿಕ ಜನ ಸಿಎಂ ಆಕಾಂಕ್ಷಿಗಳು ತಮ್ಮದೇ ಆದ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ, ಮಂಚೂಣಿಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಇದ್ದಾರೆ.

ಈಗಾಗಲೇ ಐಐಸಿಸಿಯಿಂದ ನೇಮಕಗೊಂಡಿದ್ದ ವೀಕ್ಷಕರು ಹಾಗೂ ರಾಷ್ಟ್ರೀಯ ನಾಯಕರು ರಾಜ್ಯದ 135 ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಈ ಗುಪ್ತ ಮತದಾನದ ವಿವರದೊಂದಿಗೆ ವೀಕ್ಷಕರು ದೆಹಲಿಗೆ ತೆರಳಿದ್ದಾರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನು ಖರ್ಗೆ ಅವರಿಗೆ ಹಸ್ತಾಂತರಿಸಲಿದ್ದಾರೆ. ಪಕ್ಷಕ್ಕಾಗಿ ಹೆಚ್ಚು ದುಡಿದಿದ್ದೇನೆ ಹೀಗಾಗಿ ನನಗೆ ಸಿಎಂ ಸ್ಥಾನ ಬೇಕು ಎಂದು ಡಿಕೆಶಿ ಪಟ್ಟು ಹಿಡಿದಿದ್ದು, ಹೆಚ್ಚಿನ ಶಾಸಕರ ಬೆಂಬಲ ನನಗಿದೆ. ಹೀಗಾಗಿ ನನಗೆ ಮತ್ತೊಮ್ಮೆ ಅವಕಾಶ ನೀಡಬೇಕು ಎಂದು ಸಿದ್ದು ಪಟ್ಟು ಹಿಡಿದಿದಾರೆ. ಸದ್ಯ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ಅವಕಾಶ ಹೈಕಮಾಂಡ್ ಮುಂದೆ ಇದ್ದು, ಇಬ್ಬರು ದೆಹಲಿ ಮಟ್ಟದಲ್ಲಿ ಪ್ರಯತ್ನಿಸಲು ಮುಂದಾಗಿದ್ದಾರೆ. ಹೀಗಾಗಿ ಸಿದ್ದು ದೆಹಲಿ ಪ್ರವಾಸ ಕೈಗೊಂಡಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು