Bangalore : ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್ನಲ್ಲಿ (Congress) ಸಿಎಂ ಆಯ್ಕೆ ಕಗ್ಗಂಟು ಹಾಗೆ ಉಳಿದಿದೆ. ಸದ್ಯ ಈ ಚೆಂಡು ಹೈಕಮಾಂಡ್ ಅಂಗಳದಲ್ಲಿದೆ.
ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆದಿದ್ದು, ಈ ಸಂದರ್ಭದಲ್ಲಿ ವೀಕ್ಷಕರು ಶಾಸಕರ ಬಳಿ ಅಭಿಪ್ರಾಯ ಪಡೆದಿದ್ದಾರೆ. ಸರಿಸುಮಾರು 1:30ರವರೆಗೂ ವೀಕ್ಷಕರಿಗೆ ಶಾಸಕರು ಅಭಿಪ್ರಾಯ ನೀಡಿದ್ದಾರೆ. ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar) ಇಬ್ಬರೂ ಒಪ್ಪುವಂತಹ ತೀರ್ಮಾನವನ್ನೇ ಹೈಕಮಾಂಡ್ ಅಂಗಳಕ್ಕೆ ಕಳುಹಿಸಿಕೊಡಲಾಗಿದೆ. ಹೈಕಮಾಂಡ್ ಈಗ ಯಾವ ನಿರ್ಣಯ ಕೈಗೊಳ್ಳಲಿದೆ ಎಂಬ ಕುತೂಹಲ ಮನೆ ಮಾಡುತ್ತಿದೆ.
ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ಬರೆದು ಬಾಕ್ಸ್ನಲ್ಲಿ ಹಾಕುವುದು ಹಾಗೂ ನೇರವಾಗಿ ವೀಕ್ಷಕರ ಮುಂದೆ ತಮ್ಮ ಅಭಿಪ್ರಾಯಗಳನ್ನು ಶಾಸಕರು ಮಂಡಿಸಿದ್ದಾರೆ. ಹೀಗಾಗಿ ಇಂದು ದೆಹಲಿಯಲ್ಲಿ ಹೈಕಮಾಂಡ್ ಸಭೆ ನಡೆಯಲಿದ್ದು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜೊತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೈವೋಲ್ಟೇಜ್ ಸಭೆ ನಡೆಯಲಿದೆ. ಸೋನಿಯಾ, ರಾಹುಲ್ ಜೊತೆಗಿನ ಮುನ್ನ ವೀಕ್ಷಕರ ಜೊತೆಗೆ ಖರ್ಗೆ ಸಭೆ ನಡೆಸಲಿದ್ದಾರೆ. ಚರ್ಚೆ ನಂತರ ಕ ಅಂತಿಮ ತಿರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ. ಬಹುತೇಕ ಇಂದು ಇಂದು ಇಡೀ ದಿನ ಸಿಎಂ ಆಯ್ಕೆ ಕಸರತ್ತು ನಡೆಯುವ ಸಾಧ್ಯತೆಯಿದೆ. ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಹೋಟೆಲ್ ನಲ್ಲಿ ಕೇಕ್ ಕತ್ತರಿಸಿ, ಸಂಭ್ರಮಿಸಿದ್ದಾರೆ.