Kornersite

Bengaluru Just In Karnataka Politics State

Nikhil Kumaraswamy: ಭಾವನಾತ್ಮಕ ಪೋಸ್ಟ್ ಬರೆದು, ಮನೆ ಮನೆಗೆ ತೆರಳಿ ಧನ್ಯವಾದ ಅರ್ಪಿಸಿದ ನಿಖಿಲ್!

ನಟ ಹಾಗೂ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಗೆಲುವು ಖಚಿತ ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ, ಮತದಾರ ಮಾತ್ರ ನಿಖಿಲ್ ಸೋಲಿಗೆ ಕಾರಣವಾಗಿದ್ದು, ನಿಖಿಲ್ ಮನೆ ಮೆಗೆ ತೆರಳಿ ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ (Assembly Election) ರಾಮನಗರ (Ramanagara) ಜನತೆಗೆ ಈ ಸೋಲವನ್ನು(Defeat) ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ನಿಖಿಲ್ ಅವರ ಅಭಿಮಾನಿಗಳು ತುಂಬಾ ಬೇಸರ ವ್ಯಕ್ತಪಡಿಸಿದ್ದರು. ಹೀಗಾಗಿ ನಿಖಿಲ್ ಕುಮಾರ ಸ್ವಾಮಿ ಪ್ರತಿ ಮನೆ ಮನೆಗೆ ತೆರಳಿ ಧನ್ಯವಾದ ತಿಳಿಸಿದ್ದಾರೆ. ಈ ನಡೆ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ (Sumalatha) ಅವರ ಎದುರು ಸೋತಿದ್ದ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸದಲ್ಲಿದ್ದರು. ಆದರೆ, ಅದು ಕೂಡ ಹುಸಿಯಾಗಿದೆ. ನಿಖಿಲ್‌ ಕುಮಾರಸ್ವಾಮಿ, ಕಾಂಗ್ರೆಸ್‌ (Congress) ಅಭ್ಯರ್ಥಿ ಇಕ್ಬಾಲ್ ಹುಸೇನ್ ಎದುರು 10,715 ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ನಿಖಿಲ್‌ ಕುಮಾರಸ್ವಾಮಿ ಫೇಸ್‌ಬುಕ್‌ನಲ್ಲಿ ಭಾವುಕ ಪೋಸ್ಟ್‌ ಬರೆದುಕೊಂಡಿದ್ದಾರೆ.

ನನ್ನನ್ನು ಅತ್ಯಂತ ಪ್ರೀತಿಯಿಂದ ಬೆಂಬಲಿಸಿ ಆಶೀರ್ವದಿಸಿದ ರಾಮನಗರ ವಿಧಾನಸಭೆ ಕ್ಷೇತ್ರದ ಮಹಾಜನತೆಗೆ ನನ್ನ ಶಿರಸಾಷ್ಟಾಂಗ ನಮನಗಳು. ಈ ಒಂದು ಸೋಲು ನಿಮ್ಮ ಸೇವೆ ಮಾಡಬೇಕು ಎನ್ನುವ ನನ್ನ ಅದಮ್ಯ ಸಂಕಲ್ಪಕ್ಕೆ ತಡೆ ಒಡ್ಡಲಾರದು. ನಾನೆಂದೂ ನಿಮ್ಮ ಜೊತೆಯಲ್ಲೇ ಇರುತ್ತೇನೆ. ನಿಮಗಾಗಿ ಜೀವಿಸುತ್ತೇನೆ. ಸೋಲನ್ನು ಸಮಚಿತ್ತದಿಂದ ಸ್ವಿಕರಿಸಿ ಮುನ್ನಡೆಯುತ್ತೇನೆ. ಅದು ನಾನು ನನ್ನ ಪೂಜ್ಯ ತಾತನವರಾದ ಹೆಚ್.ಡಿ ದೇವೇಗೌಡ ಸಾಹೇಬರಿಂದ, ತಂದೆ ಹೆಚ್.ಡಿ ಕುಮಾರಸ್ವಾಮಿ ಅವರಿಂದ ಕಲಿತ ಪಾಠ. ಎಡವಿದ್ದೇನೆ, ಮತ್ತೆ ಎದ್ದು ಓಡುತ್ತೇನೆ. ಬಿದ್ದ ಮಗುವನ್ನು ಮೇಲೆತ್ತುವ ನಿಮ್ಮ ಪ್ರೀತಿ, ವಾತ್ಸಲ್ಯವನ್ನು ನಾನು ಬಲ್ಲೆ. ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಜಾತ್ಯತೀತ ಜನತಾದಳವನ್ನ ಹರಸಿದ ಸಾರ್ವಜನಿಕ ಬಂಧುಗಳನ್ನು ಇಲ್ಲಿ ಸ್ಮರಿಸುತ್ತೇನೆ. ಸೋಲಿನಿಂದ ಕಂಗೆಟ್ಟು ಜನರಿಂದ ದೂರವಾಗುವ ಜಾಯಮಾನ ನಮ್ಮದಲ್ಲ. ಈ ಪರಾಜಯದಿಂದ ಪಾಠ ಕಲಿಯುತ್ತೇವೆ, ಪುನಾ ಪುಟಿದೆದ್ದು ಬರುತ್ತೇವೆ. ಪ್ರತಿಯೊಬ್ಬರಿಗೂ ಪ್ರಣಾಮಗಳು ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು