Kornersite

Bengaluru Just In Karnataka Politics State

ರಾಜ್ಯದಲ್ಲಿ ಮತ್ತೆ ಗೂಂಡಾಗಿರಿ ಮುನ್ನೆಲೆಗೆ ಬರುತ್ತಿದೆ; ನಳಿನ್ ಕುಮಾರ್ ಕಟೀಲ್ ಆರೋಪ!

Anekal : ರಾಜ್ಯದಲ್ಲಿ ಕಾಂಗ್ರೆಸ್ (Congress) ಗೆಲ್ಲುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆಯಾಗುತ್ತಿದೆ. ದೇಶದ್ರೋಹಿಗಳು ಪಾಕಿಸ್ತಾನ (Pakistan) ಕ್ಕೆ ಜೈ ಎನ್ನುತ್ತಿದ್ದಾರೆ. ಹಲವು ಕಡೆ ಗೂಂಡಾಗಿರಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಹೇಳಿದ್ದಾರೆ.

ಹೊಸಕೋಟೆ ಕ್ಷೇತ್ರ (Hosakote Constituency)ದ ಡಿ ಶೆಟ್ಟಹಳ್ಳಿಯಲ್ಲಿ ಮಾತನಾಡಿದ ಅವರು, ವಿಜಯೋತ್ಸವ ನೆಪದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆಯುತ್ತಿವೆ. ಪಟಾಕಿ ಸಿಡಿಸಬೇಡಿ ಎಂದಿದ್ದಕ್ಕೆ ದಾಳಿ ಮಾಡಿದ್ದಾರೆ. ಕಾರ್ಯಕರ್ತನ ಮನೆ ಮೇಲೆ ದಾಳಿಯಾಗಿದೆ. ಹೊಸಕೋಟೆ ಕ್ಷೇತ್ರದ ಡಿ ಶೆಟ್ಟಹಳ್ಳಿ ವಾಸಿ ಕೃಷ್ಣಪ್ಪ ಮತ್ತು ಮಗ ಬಾಬು ಮೇಲೆ ದಾಳಿಯಾಗಿದ್ದು, ಘಟನೆಯಲ್ಲಿ ಕೃಷ್ಣಪ್ಪ ಸಾವನ್ನಪ್ಪಿದ್ದಾರೆ. ಅವರ ಮಗ ಬಾಬು ಸ್ಥಿತಿ ಗಂಭೀರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೃಷ್ಣಪ್ಪನ ಪತ್ನಿ ಗಂಗಮ್ಮ ಅವರ ಮೇಲೆಯೂ ಹಲ್ಲೆ ನಡೆದಿದೆ. ಪೊಲೀಸರು ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಬೇಕು. ಪೊಲೀಸರು ಖಾಕಿ ಹಾಕಿದ್ದಾರಾ ಅಥವಾ ಕಾಂಗ್ರೆಸ್ ಬಟ್ಟೆ ಹಾಕಿದ್ದಾರಾ ಎಂದು ಪ್ರಶ್ನಿಸಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು