ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರನಲ್ಲಿ ಮೋಡ ಕವಿದ ವಾತವರಣ ಇದ್ದು, ಮಳೆಯಾಗುವ ಸಾಧ್ಯತೆ ಕಡಿಮೆ ಇದೆ ಎಂದು ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಒಣಹವೆ ಕಂಡು ಬಂದರೆ,ನಂತರ ಎರಡು ದಿನಗಳ ಕಾಲ ಹಗುರವಾದ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನದಿಂದ ಮಳೆ ಅಬ್ಬರ ಕಡಿಮೆಯಾಗಿದೆ. ಬಂಗಾಳಕೊಲ್ಲಿ ಸಮುದ್ರ ಭಾಗದಲ್ಲಿ ಮೋಕಾ ಚಂಡಮಾರುತದ ಅಬ್ಬರ ಇಳಿಮುಖವಾಗಿದೆ ಎನ್ನಲಾಗಿದೆ. ಆದರೆ, ಸೋಮವಾರ ರಾಜ್ಯದಲ್ಲಿ ಬಿಸಿಲು ಇರಲಿದೆ.