Kornersite

International Just In

Ukraine: ರಷ್ಯಾದ ದಾಳಿಯನ್ನು ಹಿಮ್ಮೆಟ್ಟಿಸಿದ ಉಕ್ರೇನ್!

ಕೀವ್ : ರಷ್ಯಾ ಹಾಗೂ ಉಕ್ರೇನ್ ಮಧ್ಯೆ ಯುದ್ಧ ಇನ್ನೂ ಮುಂದುವರೆದಿದ್ದು, ಉಕ್ರೇನಿನ (Ukraine) ಕೀವ್ ಮೇಲೆ ರಷ್ಯಾದ ದಾಳಿ ತಡೆಯುವಲ್ಲಿ ಅಲ್ಲಿನ ಸೇನೆ ಯಶಸ್ವಿಯಾಗಿದೆ. ರಷ್ಯಾದ 18 ಕ್ಷಿಪಣಿಗಳನ್ನು (Cruise Missiles) ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಷ್ಯಾದ ಕ್ಷಿಪಣಿಗಳು ವಾಯು, ಸಮುದ್ರ ಹಾಗೂ ಭೂಸೇನೆ ಸೇರಿದಂತೆ ಮೂರು ವಿಭಾಗಳಿಂದ ಉಕ್ರೇನ್ ನ ರಾಜಧಾನಿ ಕೀವ್ ಮೇಲೆ ದಾಳಿ (Russian Air Attack) ನಡೆಸಿತ್ತು. ಆದರೆ, ಪಾಶ್ಚಿಮಾತ್ರ ರಾಷ್ಟ್ರಗಳು ಸರಬರಾಜು ಮಾಡಿದ್ದ ಶಸ್ತ್ರಾಸ್ತ್ರಗಳ ಸಹಾಯದಿಂದ ಉಕ್ರೇನ್ ರಷ್ಯಾ ದಾಳಿಯನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿದೆ. ಆದರೆ, ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

ಉಕ್ರೇನ್ ರಾಜಧಾನಿಯನ್ನ ಗುರಿಯಾಗಿಸಿ MiG-31K ಯುದ್ಧವಿಮಾನದಿಂದ 6 Kinzhal ಏರೋ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಕಪ್ಪು ಸಮುದ್ರದ ಹಡಗುಗಳಿಂದ 9 ಕ್ರೂಸ್ ಕ್ಷಿಪಣಿ ಹಾಗೂ ಮೂರು ಭೂ ಆಧಾರಿತ S-400 ಕ್ರೂಸ್ ಕ್ಷಿಪಣಿಗಳನ್ನು ಉಡಾಯಿಸಿತ್ತು. ಅಲ್ಲದೇ ಇರಾನ್ ಡ್ರೋನ್‌ಗಳಿಂದಲೂ ದಾಳಿ ನಡೆಸಿತ್ತು ಎಂದು ಉಕ್ರೇನ್ ಸೇನಾಧಿಕಾರಿಗಳು ತಿಳಿಸಿದ್ದಾರೆ.

You may also like

International

ಅಮೆರಿಕದಲ್ಲಿ ಭೀಕರ ಸುಂಟರಗಾಳಿ – 7 ಜನ ಸಾವು

Washington : ಅಮೆರಿಕ(America)ದಲ್ಲಿ ಭೀಕರ ಸುಂಟರಗಾಳಿ ಬೀಸಿದ ಪರಿಣಾಮ 7 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.ಅಮೆರಿಕದ ಅರ್ಕಾನ್ಸಾಸ್‌ (Arkansas) ಮತ್ತು ಇಲಿನಾಯ್ಸ್‌ (Illinois)ರಾಜ್ಯಗಳಲ್ಲಿ ಬೀಸಿದ ಸುಂಟಗಾಳಿಗೆ ಹತ್ತಾರು
International Tech

ಹಾರಿ ಹೋದ ನೀಲಿ ಹಕ್ಕಿ- ಜಾಗ ತುಂಬಿದ ನಾಯಿ

Washington : ಟ್ವಿಟ್ಟರ್ ಸಿಇಓ ಎಲಾನಾ ಮಸ್ಕ್ ಟ್ವಿಟ್ಟರ್ ಖರೀದಿಸಿದಾಗಿನಿಂದ ಹೆಚ್ಚು ಸುದ್ದಿಯಾಗುತ್ತಲೇ ಇದ್ದಾರೆ. ಸದ್ಯ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರ ಹಾಕಿದ್ದು, ದೊಡ್ಡ