Kornersite

Crime Just In

ಲೇಡಿ ಸಿಂಗಂ ಎಂದೇ ಖ್ಯಾತರಾಗಿದ್ದ ಮಹಿಳಾ ಅಧಿಕಾರಿ ಅಪಘಾತಕ್ಕೆ ಬಲಿ!

ಅಸ್ಸಾಂನ ಲೇಡಿ ಸಿಂಗಂ ಎಂದೇ ಹೆಸರು ಮಾಡಿದ್ದ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಜುನ್ಮೋನಿ ರಾಭಾ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಅವರ ಸಾವನ್ನು ನಿಗೂಢ ಎಂದಿರುವು ಕುಟುಂಬವು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದೆ. ಅವರ ಕಾರಿಗೆ ಕಂಟೈನರ್ ಮುಂಭಾಗದಿಂದ ಡಿಕ್ಕಿ ಹೊಡೆದಿದೆ. ಕಲಿಯಾಬೋರ್ ಉಪವಿಭಾಗದ ಜಖಲಬಂಧ ಪೊಲೀಸ್ ಠಾಣೆ ವ್ಯಾಪ್ತಿಯ ಸರುಭುಗಿಯಾ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಹೋದರ ಕರುಣಾ ರಭಾ, ‘ನನ್ನ ಸಹೋದರಿ ಗುವಾಹಟಿಯಲ್ಲಿರುವ ಮನೆಯಿಂದ ಹೊರಟು, ತನ್ನ ಸಹೋದ್ಯೋಗಿ ಅಭಾ ರಭಾ ಜೊತೆ ಹೋಗುವುದಾಗಿ ಹೇಳಿದ್ದಳು, ಆದರೆ ನಂತರ ಅವಳು ಒಬ್ಬಂಟಿಯಾಗಿ ಹೋಗಿದ್ದು ಎಂದು ಹೇಳಿದ್ದಾರೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ರಾಭಾ ಅವರನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಡಿಕ್ಕಿಯಾದ ಕಂಟೈನರ್ ಟ್ರಕ್ ಯುಪಿಯಿಂದ ಬಂದಿತ್ತು ಎನ್ನಲಾಗಿದೆ, ಸದ್ಯ ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ಉತ್ತರ ಲಖಿಂಪುರ ಪೊಲೀಸ್ ಠಾಣೆಯಲ್ಲಿ ಜುನ್ಮೋನಿ ವಿರುದ್ಧ ಪ್ರಕರಣ ದಾಖಲಾಗಿದೆ. ಮೇ 6 ರಂದು ನಾಗಾಂವ್‌ನಲ್ಲಿ ಸಬ್‌ಇನ್ಸ್‌ಪೆಕ್ಟರ್ ಆಗಿ ನೇಮಕಗೊಂಡ ಜುನ್ಮೋನಿ ಯಾವುದೇ ಕಾರಣವಿಲ್ಲದೆ ತನ್ನ ಮಗನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ದೂರುದಾರರು ಎಫ್‌ಐಆರ್‌ನಲ್ಲಿ ಆರೋಪಿಸಿದ್ದರು. ಘಟನೆ ನಂತರ ಚಾಲಕ ಪರಾರಿಯಾಗಿದ್ದಾನೆ. ಸದ್ಯ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ