NewDelhi : ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕಾಗಿ ಸಿದ್ದು ಹಾಗೂ ಡಿಕೆಶಿ ಮಧ್ಯೆ ಬಿಗ್ ಫೈಟ್ ನಡೆದಿತ್ತು. ಸದ್ಯ ಸಂಧಾನ ನಡೆದಿದ್ದು, ಸಿದ್ದರಾಮಯ್ಯ (Siddaramaiah) ಮತ್ತೊಮ್ಮೆ ಸಿಎಂ ಆಗುವ ಸಾಧ್ಯತೆ ಇದ್ದು, ಡಿಕೆ ಶಿವಕುಮಾರ್ (DK Shivakumar) ಡಿಸಿಎಂ ಆಗಬಹುದು ಎನ್ನಲಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ, ಡಿಕೆ ಶಿವಕುಮಾರ್ ಅವರಿಗೆ ಪ್ರಬಲವಾದ ಎರಡು ಖಾತೆಗಳೊಂದಿಗೆ ಡಿಸಿಎಂ ಸ್ಥಾನ ನೀಡಲು ಎಐಸಿಸಿ ಮುಂದಾಗಿದೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷರಾಗಿಯೇ ಡಿಕೆ ಶಿವಕುಮಾರ್ ಅವರೇ ಮುಂದುವರಿಯುವ ಸಾಧ್ಯತೆಯಿದೆ.
ಹಟಕ್ಕೆ ಬಿದ್ದರೆ ಸಿಎಂ ಅವಕಾಶ ಬೇರೆಯವರ ಪಾಲಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಜಿ ಸಂಧಾನ ಮಾಡಿಕೊಂಡರೆ ಇಬ್ಬರಿಗೂ ಲಾಭ ಎಂಬದುನ್ನು ಹೈಕಮಾಂಡ್ ನಾಯಕರು ಡಿಕೆಶಿ ಮತ್ತು ಸಿದ್ದರಾಮಯ್ಯ ಅವರಿಗೆ ವಿವರಿಸಿದ್ದಾರೆ. ಪೂರ್ಣಾವಧಿ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ 50:50 ಸೂತ್ರದ ಅಧಿಕಾರ ಹಂಚಿಕೆಗೆ ಸಿದ್ದರಿದ್ದಾರೆ. 2 ವರ್ಷದ ಅವಧಿಗೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವುದು ಹಾಗೂ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸುವುದು ಎಂದು ಕಾಂಗ್ರೆಸ್ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.
ಲೋಕಸಭಾ ಚುನಾವಣೆಯ ನಂತರವೂ ಒಂದು ವರ್ಷ ಅವರನ್ನು ಮುಂದುವರಿಸಿ ಕೊನೆಯ ಮೂರು ವರ್ಷ ಡಿಕೆಗೆ ಸಿಎಂ ಪಟ್ಟ ನೀಡಿ 2028ರಲ್ಲಿ ಡಿಕೆಶಿ ಮೂಲಕ ಚುನಾವಣೆ ಎದುರಿಸುವ ಅವಕಾಶ ನೀಡಲು ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದೆ. ಆಗಲೂ ಚುನಾವಣೆ ಗೆದ್ದರೆ ಡಿಕೆಶಿ ಮತ್ತೊಮ್ಮೆ ಸಿಎಂ ಆಗಬಹುದು. ಈ ಸಂಧಾನ ಸೂತ್ರವೇ ಅಂತಿಮವಾಗಿದ್ದು ಇಬ್ಬರು ನಾಯಕರು ಒಪ್ಪುವ ಸಾಧ್ಯತೆಯಿದೆ.