ಮಂಗಳೂರು: ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು, ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಹತ್ತಿರ ನಡೆದಿದೆ.
ಒಎಂಪಿಎಲ್ ಸಂಸ್ಥೆಗೆ ಸೇರಿದ್ದ ಬಸ್ ಗೆ ಬೆಂಕಿ ಹೊತ್ತಿಕೊಂಡು ಕೆಲವೇ ಕ್ಷಣಗಳಲ್ಲಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ. ಮಂಗಳೂರು – ಕಟೀಲು ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸ್ ಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಮಂಗಳೂರು – ಕಟೀಲು ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸ್ ಕಟೀಲು ದೇಗುಲದ ಹತ್ತಿರ ನೌಕರಸ್ಥರನ್ನು ಇಳಿಸಿ ಮರಳಿ ಹೋಗುವಾಗ ಈ ಘಟನೆ ನಡೆದಿದೆ. ರಸ್ತೆಯಲ್ಲಿಯೇ ಹೋಗುತ್ತಿದ್ದ ಟ್ಯಾಂಕರ್ನಿಂದ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಲಾಯಿತದಾರೂ ಪ್ರಯೋಜನವಾಗಲಿಲ್ಲ. ಬೆಂಕಿ ಹತ್ತಿದ್ದ ಸಂದರ್ಭದಲ್ಲಿ ಚಾಲಕ ಹಾಗೂ ಇನ್ನಿತರ ಇಬ್ಬರು ವ್ಯಕ್ತಿಗಳು ಮಾತ್ರ ಬಸ್ ನಲ್ಲಿ ಇದ್ದರು ಎನ್ನಲಾಗಿದೆ.