ಐಪಿಎಲ್ನ 62ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನ ಆಟಗಾರ ಶುಭಮನ್ ಗಿಲ್ ಅವರು ಹೈದರಾಬಾದ್ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದ್ದರು. ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಮುರಿದಿದ್ದಾರೆ.
ಹೈದರಾಬಾದ್ ವಿರುದ್ಧದ ಈ ಪಂದ್ಯದಲ್ಲಿ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ವಿಶೇಷ ಎಂದರೆ ಕಡಿಮೆ ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದರೂ ಗಿಲ್ ಈ ವೇಳೆ ಒಂದೇ ಒಂದು ಸಿಕ್ಸ್ ಬಾರಿಸಿರಲಿಲ್ಲ. ಇದುವೇ ಈಗ ದಾಖಲೆಯಾಗಿದೆ. ಅಂದರೆ ಐಪಿಎಲ್ನಲ್ಲಿ ಸಿಕ್ಸ್ ಬಾರಿಸದೇ ಅತೀ ವೇಗವಾಗಿ ಅರ್ಧಶತಕ ಬಾರಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.
2010 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಚಿನ್ ತೆಂಡೂಲ್ಕರ್ ಕೇವಲ 23 ಎಸೆತಗಳಲ್ಲಿ ಹಾಫ್ ಸೆಂಚುರಿ ಬಾರಿಸಿದ್ದರು. ಈ ಸಂದರ್ಭದಲ್ಲಿ ಅವರು ಒಂದೇ ಒಂದು ಸಿಕ್ಸ್ ಬಾರಿಸಿರಲಿಲ್ಲ. ಸದ್ಯ ಒಂದೇ ಒಂದು ಸಿಕ್ಸ್ ಸಿಡಿಸದೇ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಇದರೊಂದಿಗೆ ಕಳೆದ 1 ದಶಕಗಳಿಂದ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಗಿಲ್ ಪಾಲಾಗಿದೆ. ಅಂತಿಮವಾಗಿ ಗಿಲ್, ಗಿಲ್ 56 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಅಲ್ಲದೆ ಅಂತಿಮವಾಗಿ 58 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 13 ಬೌಂಡರಿಗಳೊಂದಿಗೆ 101 ರನ್ ಬಾರಿಸಿ ಮಿಂಚಿದ್ದರು.