Kornersite

Bengaluru Karnataka Politics State

ಕರ್ನಾಟಕದ ಸಿಎಂ ಆಯ್ಕೆ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ; ಸುಳ್ಳು ಸುದ್ದಿ ಹಬ್ಬಿದೆ?

NewDelhi : ಕರ್ನಾಟಕ ಸಿಎಂ ಹುದ್ದೆ ಆಯ್ಕೆ ಪ್ರಕ್ರಿಯೆ ಇನ್ನೂ ಮುಗಿದಿಲ್ಲ. ಅದು ನಡೆಯುತ್ತಿದೆ. ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಎದುರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಈ ಕುರಿತು ಇನ್ನೂ ಚರ್ಚೆ ನಡೆಯುತ್ತಿದೆ. ಈ ಕುರಿತು ಸಂಪೂರ್ಣವಾಗಿ ನಿರ್ಧಾರ ಕೈಗೊಂಡಾಗ ನಾವು ತಿಳಿಸುತ್ತೇವೆ. ಇನ್ನು 48-72 ಗಂಟೆಗಳಲ್ಲಿ ಕರ್ನಾಟಕದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಲಿದೆ ಎಂದು ಹೇಳಿದ್ದಾರೆ.

ಸಿಎಂ ಆಯ್ಕೆ ವಿಚಾರವಾಗಿ ಈಗ ಹರಿದಾಡುತ್ತಿರುವುದು ಸುಳ್ಳು ಸುದ್ದಿ ಎಂದ ಸುರ್ಜೇವಾಲ, ಶಾಸಕಾಂಗ ಪಕ್ಷದ ನಾಯಕರು ಯಾರು ಎಂಬುವುದು ಇನ್ನೂ ಅಂತಿಮವಾಗಿಲ್ಲ. ಇಂದು ಅಥವಾ ನಾಳೆ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಎಐಸಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಆದರೆ ನಾಳೆ ಪ್ರಮಾಣವಚನ ಇರುವುದಿಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸುದ್ದಿ ಹರಿದಾಡಿತ್ತು. ಸಿದ್ದರಾಮಯ್ಯ ಅವರನ್ನೇ ಸಿಎಂ ಎಂದು ಅಂತಿಮಗೊಳಿಸಲಾಗಿದೆ ಎಂದು ಅನೇಕರು ಹೇಳಿದ್ದರು. ಹಲವೆಡೆ ಸಿದ್ದು ಅಭಿಮಾನಿಗಳು ಸಂಭ್ರಮಾಚರಣೆ ಕೂಡ ಮಾಡಿದ್ದರು. ಇದಕ್ಕೆಲ್ಲ ಸುರ್ಜೇವಾಲ ಬ್ರೇಕ್ ಹಾಕಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು