ಬೆಂಗಳೂರು : ಸಿಎಂ ಪಟ್ಟ ಯಾರಿಗೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಸಿದ್ದರಾಮಯ್ಯ ಪಟ್ಟಕ್ಕೇರಲು ದೆಹಲಿಯಲ್ಲಿ (Delhi) ರಾಹುಲ್ ಗಾಂಧಿ (Rahul Gandhi) ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಸಿದ್ದರಾಮಯ್ಯ (Siddaramaiah) ಸಿಎಂ ಆಗುತ್ತಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮನೆಯ ಮುಂದೆ ಭಾರೀ ಜನಸ್ತೋಮ ಸೇರಿದ್ದು, ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ವರುಣಾ (Varuna) ಕ್ಷೇತ್ರದಲ್ಲೂ ಸಹ ಸಂಭ್ರಮ ಮನೆ ಮಾಡಿದೆ.
ಸಿದ್ದರಾಮಯ್ಯ ಸಿಎಂ ಆಗಲು ಹೈಕಮಾಂಡ್ (High Command) ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ಕರೆಂಟ್ ಫ್ರೀ, ಬಸ್ ನಲ್ಲಿ ಮಹಿಳೆಯರಿಗೆ ಪ್ರಯಾಣ ಫ್ರೀ, ಗೃಹಿಣಿಯರಿಗೆ 2 ಸಾವಿರ ರೂ. ದುಡ್ಡು ಎಂದು ಅನೇಕ ಘೋಷಣೆಗಳನ್ನು ಕೂಗಿ ಸಿದ್ದರಾಮಯ್ಯ ಅವರಿಗೆ ಜೈಕಾರ ಹಾಕಿ ಸಂಭ್ರಮಿಸುತ್ತಿದ್ದಾರೆ. ಡಿ.ಕೆ. ಶಿವಕುಮಾರ್ (D.K.Shivakumar) ಉಪಮುಖ್ಯಂತ್ರಿ ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಲು ಹೈಕಮಾಂಡ್ ಒಪ್ಪಿಗೆ ಸೂಚಿಸಿದ್ದು, ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಲು ರಾಹುಲ್ ನಿವಾಸಕ್ಕೆ ಆಗಮಿಸಿದ್ದಾರೆ.