Kornersite

Just In

ಹತಾಶೆಯಿಂದ ಮಗುವನ್ನೇ ಸಿಎಂ ಎದುರು ಎಸೆದ ತಂದೆ!

Bhopal : ತಂದೆಯೊಬ್ಬ ತನ್ನ ಮಗುವನ್ನೇ ಸಿಎಂ ಮುದೆ ಎಸೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಚಿಕಿತ್ಸೆಗೆ ಕರೆತಂದ ತನ್ನ ಪುಟ್ಟ ಕಂದಮ್ಮನನ್ನು ವೇದಿಕೆಯಲ್ಲಿ ಕುಳಿತಿದ್ದ ಸಿಎಂ ಶಿವರಾಜ್ ಸಿಂಗ್ ಚವ್ಹಾಣ್ (Shivraj Singh Chouhan) ಮುಂದೆ ಎಸೆದಿದ್ದಾನೆ. ಈ ಘಟನೆ ಮಧ್ಯಪ್ರದೇಶ (Madhyapradesh) ದ ಸಾಗರ್ ಎಂಬಲ್ಲಿ ನಡೆದಿದೆ. ವ್ಯಕ್ತಿಯನ್ನು ಮುಕೇಶ್ ಪಟೇಲ್ ಎಂದು ಗುರುತಿಸಲಾಗಿದೆ. ವ್ಯಕ್ತಿಯು ತನ್ನ 1 ವರ್ಷದ ಮಗುವನ್ನು ವೇದಿಕೆಗೆ ಎಸೆಯುತ್ತಿದ್ದಂತೆಯೇ ಪೊಲೀಸರು. ಕೂಡಲೇ ಮಗುವನ್ನು ತೆಗೆದುಕೊಂಡು ತಾಯಿಗೆ ಒಪ್ಪಿಸಿದ್ದಾರೆ. ಈ ಘಟನೆಯಿಂದಾಗಿ ಕಾರ್ಯಕ್ರಮದಲ್ಲಿ ನೆರೆದಿದ್ದವರಲ್ಲಿ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.

ಮಧ್ಯಪ್ರದೇಶದ ಸಿಎಂ ಅವರು, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದರು. ಸಾಗರದ ಕೆಸ್ಲಿ ತಹಸಿಲ್ ನ ಹಜ್‍ಪುರ ಗ್ರಾಮದ ನಿವಾಸಿ ಮುಖೇಶ್ ಪಟೇಲ್ (Mukesh Patel) ಹಾಗೂ ನೇಹಾ ದಂಪತಿಯ ಮಗುವಿನ ಹೃದಯದಲ್ಲಿ ರಂಧ್ರವಿದ್ದು, ಮಗುವಿನ ಚಿಕಿತ್ಸೆಗಾಗಿ 4 ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿದ್ದಾರೆ. ಆದರೆ ಮಗುವಿನ ಶಸ್ತ್ರಚಿಕಿತ್ಸೆಗೆ ಇನ್ನೂ ಹೆಚ್ಚಿನ ಹಣದ ಅವಶ್ಯಕತೆ ಇತ್ತು. ಹೀಗಾಗಿ ಸಿಎಂ ಅವರ ಬಳಿ ಹಣ ಸಹಾಯ ಕೇಳಲು ಮುಂದಾಗಿದ್ದಾರೆ. ಆದರೆ, ಪೊಲೀಸರು ಇದಕ್ಕೆ ಅವಕಾಶ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದಾಗಲೇ ಮುಖ್ಯಮಂತ್ರಿಯ ಗಮನಕ್ಕೆ ತರುವ ಸಲುವಾಗಿ ಮುಕೇಶ್ ತನ್ನ ಮಗುವನ್ನು ವೇದಿಕೆಯ ಬಳಿ ಎಸೆದಿದ್ದಾರೆ.

ಇದನ್ನು ಗಮನಿಸಿದ ಅಧಿಕಾರಿಗಳು ಕೂಡಲೇ ಮಗುವನ್ನು ಮೇಲೆತ್ತಿ ತಾಯಿಗೆ ನೀಡಿದ್ದಾರೆ. ನಂತರ ಮುಖ್ಯಮಂತ್ರಿಗೆ ಈ ವಿಷಯ ಹೇಳಿದ್ದಾರೆ. ಆತನ ಮಗುವಿನ ಹೃದಯದಲ್ಲಿ ರಂಧ್ರವಿದೆ. ಸಹಾಯಕ್ಕಾಗಿ ಬಂದಿದ್ದಾರೆ ಎಂದು ತಿಳಿಸಿದ್ದಾರೆ. ಇದಕ್ಕೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಎಲ್ಲಾ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.

You may also like

Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ
Bengaluru Just In Politics

ಕಾಂಗ್ರೆಸ್ (Congress) 2ನೇ ಪಟ್ಟಿಯಲ್ಲೂ ಸಿದ್ದರಾಮಯ್ಯ (Siddaramaiah) ಮಿಸ್ಸಿಂಗ್!-42 ಅಭ್ಯರ್ಥಿಗಳ ಪಟ್ಟಿಯಲ್ಲಿ ಬಾದಾಮಿ ಸೋಲ್ಡ್ ಔಟ್

Bangalore: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎಡನೇ ಪಟ್ಟಿ ಬಿಡುಗಡೆ ಮಾಡಿದೆ. ಇಂದು ಎಐಸಿಸಿ 42 ಕ್ಷೇತ್ರಗಳ