Bhopal : ತಂದೆಯೊಬ್ಬ ತನ್ನ ಮಗುವನ್ನೇ ಸಿಎಂ ಮುದೆ ಎಸೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಚಿಕಿತ್ಸೆಗೆ ಕರೆತಂದ ತನ್ನ ಪುಟ್ಟ ಕಂದಮ್ಮನನ್ನು ವೇದಿಕೆಯಲ್ಲಿ ಕುಳಿತಿದ್ದ ಸಿಎಂ ಶಿವರಾಜ್ ಸಿಂಗ್ ಚವ್ಹಾಣ್ (Shivraj Singh Chouhan) ಮುಂದೆ ಎಸೆದಿದ್ದಾನೆ. ಈ ಘಟನೆ ಮಧ್ಯಪ್ರದೇಶ (Madhyapradesh) ದ ಸಾಗರ್ ಎಂಬಲ್ಲಿ ನಡೆದಿದೆ. ವ್ಯಕ್ತಿಯನ್ನು ಮುಕೇಶ್ ಪಟೇಲ್ ಎಂದು ಗುರುತಿಸಲಾಗಿದೆ. ವ್ಯಕ್ತಿಯು ತನ್ನ 1 ವರ್ಷದ ಮಗುವನ್ನು ವೇದಿಕೆಗೆ ಎಸೆಯುತ್ತಿದ್ದಂತೆಯೇ ಪೊಲೀಸರು. ಕೂಡಲೇ ಮಗುವನ್ನು ತೆಗೆದುಕೊಂಡು ತಾಯಿಗೆ ಒಪ್ಪಿಸಿದ್ದಾರೆ. ಈ ಘಟನೆಯಿಂದಾಗಿ ಕಾರ್ಯಕ್ರಮದಲ್ಲಿ ನೆರೆದಿದ್ದವರಲ್ಲಿ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.
ಮಧ್ಯಪ್ರದೇಶದ ಸಿಎಂ ಅವರು, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದರು. ಸಾಗರದ ಕೆಸ್ಲಿ ತಹಸಿಲ್ ನ ಹಜ್ಪುರ ಗ್ರಾಮದ ನಿವಾಸಿ ಮುಖೇಶ್ ಪಟೇಲ್ (Mukesh Patel) ಹಾಗೂ ನೇಹಾ ದಂಪತಿಯ ಮಗುವಿನ ಹೃದಯದಲ್ಲಿ ರಂಧ್ರವಿದ್ದು, ಮಗುವಿನ ಚಿಕಿತ್ಸೆಗಾಗಿ 4 ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿದ್ದಾರೆ. ಆದರೆ ಮಗುವಿನ ಶಸ್ತ್ರಚಿಕಿತ್ಸೆಗೆ ಇನ್ನೂ ಹೆಚ್ಚಿನ ಹಣದ ಅವಶ್ಯಕತೆ ಇತ್ತು. ಹೀಗಾಗಿ ಸಿಎಂ ಅವರ ಬಳಿ ಹಣ ಸಹಾಯ ಕೇಳಲು ಮುಂದಾಗಿದ್ದಾರೆ. ಆದರೆ, ಪೊಲೀಸರು ಇದಕ್ಕೆ ಅವಕಾಶ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದಾಗಲೇ ಮುಖ್ಯಮಂತ್ರಿಯ ಗಮನಕ್ಕೆ ತರುವ ಸಲುವಾಗಿ ಮುಕೇಶ್ ತನ್ನ ಮಗುವನ್ನು ವೇದಿಕೆಯ ಬಳಿ ಎಸೆದಿದ್ದಾರೆ.
ಇದನ್ನು ಗಮನಿಸಿದ ಅಧಿಕಾರಿಗಳು ಕೂಡಲೇ ಮಗುವನ್ನು ಮೇಲೆತ್ತಿ ತಾಯಿಗೆ ನೀಡಿದ್ದಾರೆ. ನಂತರ ಮುಖ್ಯಮಂತ್ರಿಗೆ ಈ ವಿಷಯ ಹೇಳಿದ್ದಾರೆ. ಆತನ ಮಗುವಿನ ಹೃದಯದಲ್ಲಿ ರಂಧ್ರವಿದೆ. ಸಹಾಯಕ್ಕಾಗಿ ಬಂದಿದ್ದಾರೆ ಎಂದು ತಿಳಿಸಿದ್ದಾರೆ. ಇದಕ್ಕೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಎಲ್ಲಾ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.