Bangalore : ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ರಾಜ್ಯದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಎಐಸಿಸಿಯಿಂದ (AICC) ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರ ಹೆಸರು ಘೋಷಣೆಯಾದ ಬೆನ್ನಲ್ಲಿಯೇ ಸಿದ್ದರಾಮಯ್ಯ ಈ ಕುರಿತು ತಮ್ಮ ಟ್ವಿಟ್ಟರ್ (Twitter) ಮಾಡಿ ಸಂತೋಷ ಹಂಚಿಕೊಂಡಿದ್ದಾರೆ.
![](https://kornersite.com/wp-content/uploads/2023/05/Untitled-design-2023-05-18T081324.886-1024x576.png)
ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆಯಾಗಿದ್ದು, ಮುಂದಿನ ಎರಡು ವರ್ಷಗಳ ಕಾಲ ಆಡಳಿತವನ್ನು ನೀಡಲಿದ್ದಾರೆ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (D.K.Shivakumar) ಅವರು ತನಗೇ ಸಿಎಂ ಪಟ್ಟ ನೀಡಬೇಕು ಎಂದು ಪಣತೊಟ್ಟಿದ್ದರಾದರೂ ಕೊನೆಗೆ ಹೈಕಮಾಂಡ್ ಒತ್ತಾಯಕ್ಕೆ ಮಣಿದಿದ್ದಾರೆ. ಡಿಸಿಎಂ ಆಗಿ ಡಿಕೆಶಿ ಆಯ್ಕೆಯಾಗಿದ್ದಾರೆ. ಈಗ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದ ಹಿನ್ನಲೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಈ ಕುರಿತು ಟ್ವೀಟ್ ಮಾಡಿದ್ದು, ಮಲ್ಲಿಕಾರ್ಜುನ ಖರ್ಗೆ ಅವರೊಂದಿಗಿನ ಫೋಟೋ ಪೋಸ್ಟ್ ಮಾಡುವ ಮೂಲಕ ಸಂತೋಷವನ್ನು ಹಂಚಿಕೊಂಡಿದ್ದಾರೆ.