Kornersite

Bengaluru Just In Karnataka Politics State

Nikhil Kumaraswamy: ಕೂಪನ್ ಹಂಚಿ ನನ್ನನ್ನು ಸೋಲಿಸಿದರು; ನಿಖಿಲ್ ಬೇಸರ

Ramanagar : ಮಧ್ಯರಾತ್ರಿ ಕಾಂಗ್ರೆಸ್‌ (Congress) ಪಕ್ಷವು ಹಣದ ಕೂಪನ್ ಕಾರ್ಡ್ ಕೊಟ್ಟು ಆರ್ಥಿಕವಾಗಿ ಹಿಂದುಳಿದವರ ಮತ ಪಡೆದು ನನ್ನನ್ನು ಸೋಲಿಸಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಬೇಸರ ವ್ಯಕ್ತಪಡಿಸಿದ್ದಾರೆ.

ಚನ್ನಪಟ್ಟಣದಲ್ಲಿ (Channapatna Constituency) ನಡೆದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ತಂದೆ ಪಂಚರತ್ನ ಯಾತ್ರೆ ನಡೆಸಿದರು. ಯುವಕರು, ರೈತರು ಎಲ್ಲರೂ ಕುಮಾರಣ್ಣನ ಕೈಹಿಡಿದಿದ್ದಾರೆ. ಕುಮಾರಣ್ಣನ (HD Kumaraswamy) ಮೇಲೆ ಜನರ ಪ್ರೀತಿ ಕಂಡು ನಾನೇ ಬೆರಗಾದೆ. ರಾಮನಗರ ಜಿಲ್ಲೆಯಲ್ಲಿ ಅತಿಹೆಚ್ಚು ನಿಷ್ಠಾವಂತ ಕಾರ್ಯಕರ್ತರು ಇರುವುದು ಚನ್ನಪಟ್ಟಣದಲ್ಲೆ. ನಾನು ಸೋತಿರಬಹುದು, ಆದರೆ ರಾಮನಗರದ ಜನ ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

2004 ರಿಂದ ಕುಮಾರಸ್ವಾಮಿ ಅವರು ರಾಮನಗರದಿಂದ ಸ್ಪರ್ಧೆ ಮಾಡಿದ್ದಾರೆ. ಅಂದಿನಿಂದ ಇಂದಿನವರೆಗೂ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿ ರಾಮಾನಗರವನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಿದ್ದಾರೆ. ಆದರೆ, ಈ ಬಾರೀ ಈ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡಿದ್ದೆ. ನನ್ನನ್ನು ಸೋಲಿಸುವುದಕ್ಕಾಗಿ ಕಾಂಗ್ರೆಸ್ ನವರು ಕೂಪನ್ ಹಂಚಿದರು. ಹೀಗಾಗಿ ನಾನು ಸೋಲಬೇಕಾಯಿತು ಎಂದು ಆರೋಪಿಸಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು