Kornersite

Just In Karnataka Politics State

ಹಣಕಾಸು ಖಾತೆ ಬಿಡದ ಸಿದ್ದರಾಮಯ್ಯ; ಡಿಕೆಶಿಗೆ ಪ್ರಮುಖ ಖಾತೆಗಳು!

ಬೆಂಗಳೂರು : ಕಾಂಗ್ರೆಸ್ ನಲ್ಲಿ ಈಗಾಗಲೇ ಸಿಎಂ ಕುರ್ಚಿಯ ಫೈಟ್ ಅಂತ್ಯವಾಗಿದೆ. ಸಿಎಂ ಪಟ್ಟದ ಮೇಲೆ ಕಣ್ಣಿಟ್ಟಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DK Shivakumar) ಹಣಕಾಸು ಖಾತೆ ನೀಡಬೇಕೆಂದೂ ಪಟ್ಟು ಹಿಡಿದಿದ್ದರು. ಆದರೆ, ಇದಕ್ಕೆ ಹೈಕಮಾಂಡ್ ಸೊಪ್ಪು ಹಾಕಿಲ್ಲ ಎನ್ನಲಾಗಿದೆ.

ಸಿದ್ದರಾಮಯ್ಯನವರಿಗೆ (Siddaramaiah) ಸಿಎಂ ಹುದ್ದೆ ಸಿಕ್ಕಿದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್‌ ತಮಗೆ ಹಣಕಾಸು ಖಾತೆ (Ministry of Finance) ನೀಡುವಂತೆ ಹೈಕಮಾಂಡ್‌ ಬಳಿ ಮನವಿ ಮಾಡಿದ್ದರು. ಆದರೆ ಸಿದ್ದರಾಮಯ್ಯ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಎನ್ನಲಾಗಿದ್ದು, ಬೇರೆ ಯಾವುದೇ ಖಾತೆ ನೀಡಿ, ಆದರೆ ಹಣಕಾಸು ಖಾತೆಯನ್ನು ನಾನೇ ಇಟ್ಟುಕೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ಡಿಕೆಶಿಗೆ ಎರಡು ಪ್ರಬಲ ಖಾತೆ ನೀಡಲಾಗಿದೆ.

ಡಿಕೆಶಿಗೆ ಬೆಂಗಳೂರು ಅಭಿವೃದ್ಧಿ ಹಾಗೂ ಜಲಸಂಪನ್ಮೂಲ ಖಾತೆಯನ್ನು ನೀಡಲು ಹೈಕಮಾಂಡ್‌ ಅನುಮತಿ ನೀಡಿದೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಡಿಕೆಶಿ ಇಂಧನ ಖಾತೆಯನ್ನು ಹೊಂದಿದ್ದರೆ ಎಂಬಿ ಪಾಟೀಲ್‌ ಜಲಸಂಪನ್ಮೂಲ ಖಾತೆಯ ಸಚಿವರಾಗಿದ್ದರು.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು