Kornersite

Bengaluru Just In Karnataka National Politics State

2 ಸಾವಿರ ರೂಪಾಯಿ ನೋಟ್ ಹಿಂದೆ ಪಡೆದ RBI

Bangalore : ದೇಶದಲ್ಲಿ ಚಲಾವಣೆಯಲ್ಲಿದ್ದ 2,000 ರೂ. ಮುಖಬೆಲೆಯ ನೋಟುಗಳನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ರದ್ದು ಮಾಡಿದೆ. ಇದಕ್ಕೆ ನಿಯೋಜಿತ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

2023ರ ಸೆಪ್ಟೆಂಬರ್ 30ರ ಒಳಗೆ ಬ್ಯಾಂಕುಗಳಲ್ಲಿ 2000 ರೂ. ನೋಟುಗಳನ್ನು ಬದಲಾಯಿಸಿಕೊಳ್ಳುವಂತೆ ಆರ್‌ಬಿಐ ಪ್ರಕಟಣೆ ಮೂಲಕ ಸೂಚಿಸಿದೆ. ಈ ಕುರಿತು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ(Siddaramaiah), ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದ ಮತ್ತೊಮ್ಮೆ ನೋಟು ನಿಷೇಧ ಆಗಿದೆ. ಸರ್ಕಾರದ ವೈಫಲ್ಯಗಳಿಂದ ಜನರ ಗಮನ ಬೇರೆ ಕಡೆಗೆ ಸೆಳೆಯಲು ಪ್ರಧಾನಿ ಈ ರೀತಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಅವರ ಇಂತಹ ನಡುವಳಿಕೆ ತೀವ್ರ ಬೇಸರ ತರುತ್ತಿದೆ. ಕೇಂದ್ರ ಸರ್ಕಾರಕ್ಕೆ ತಮ್ಮದೇ ನೀತಿಗಳ ಬಗ್ಗೆ ಸ್ಪಷ್ಟತೆಯಿಲ್ಲ. 2,000 ರೂ. ಮುಖಬೆಲೆಯ ನೋಟುಗಳನ್ನು ಬ್ಯಾನ್ ಮಾಡುವ ಯೋಜನೆ ಇದ್ದಿದ್ದರೆ ಅದನ್ನು 2016ರಲ್ಲಿ ಏಕೆ ಪರಿಚಯಿಸಿದರು. ತಮ್ಮ ವೈಫಲ್ಯಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದಾರೆ ಎಂದು ನೋಟ್ ಬ್ಯಾನ್ ಹ್ಯಾಶ್‌ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು