Kornersite

Just In National

ರಸ್ತೆ ಮಧ್ಯೆ ಸ್ಕೂಟರ್ ನಲ್ಲಿ ಹೋಗುತ್ತ ಸ್ನಾನ ಮಾಡಿದ ಜೋಡಿ; ವಿಡಿಯೋ ವೈರಲ್!

ಸಾಮಾಜಿಕ ಜಾಲತಾಣದಲ್ಲಿ ಲೈಕ್, ಶೇರ್ ಗಾಗಿ ಇತ್ತೀಚೆಗೆ ಯುವ ಸಮೂಹ ಏನೇನೊ ಮಾಡುತ್ತಿದೆ. ಈ ಮಧ್ಯೆ ಇಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ರಸ್ತೆಯಲ್ಲಿ ಸ್ಕೂಟರ್ ಮೇಲೆ ಚಲಿಸುತ್ತ ಜೋಡಿಯೊಂದು ಸ್ನಾನ ಮಾಡಿದೆ.

ದಾರಿಹೋಕರು ಈ ವಿಡಿಯೋ ಮಾಡಿ ಪೊಲೀಸರಿಗೆ ಟ್ಯಾಗ್ ಮಾಡಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಥಾಣೆಯ ಪೊಲೀಸರು ಕ್ರಮ ಕೈಗೊಳ್ಳುವುದಾಗಿ ಪ್ರತಿಕ್ರಿಯಿಸಿದ್ದಾರೆ. ಉಲ್ಲಾಸನಗರದ ಜನನಿಬಿಡ ರಸ್ತೆಯಲ್ಲಿ ಈ ಯುವಜೋಡಿ ಹೀಗೆ ಮಾಡಿದ್ದು ನೆಟ್ಟಿಗರ ಕಂಗೆಣ್ಣಿಗೆ ಗುರಿಯಾಗಿದೆ. ಸ್ಕೂಟರ್ ಹಿಂದೆ ಬಕೆಟ್, ಮಗ್ ಹಿಡಿದುಕೊಂಡು ಕುಳಿತ ಯುವತಿ ತಾನೂ ನೀರು ಸುರಿದುಕೊಳ್ಳುತ್ತ, ಮುಂದೆ ಗಾಡಿ ಓಡಿಸುತ್ತಿದ್ದ ಯುವಕನ ಮೇಲೆಯೂ ನೀರು ಸುರಿಯುತ್ತಾಳೆ. ಬೇಸಿಗೆಯಲ್ಲಿ ಇದು ಉಲ್ಲಾಸ ನೀಡಿದಂತಾದರೂ ರಸ್ತೆಯಲ್ಲಿ ವಾಹನ ಚಲಾಯಿಸುತ್ತ ಹೀಗೆ ಮಾಡುವುದು ತಪ್ಪಲ್ಲವೇ? ಈ ವಿಡಿಯೋ ಸದ್ಯ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

You may also like

National

ರಾಮಲೀಲಾ ಮೈದಾನದಲ್ಲಿ ಜಮಾಯಿಸುತ್ತಿರುವ ರೈತರು

ನವದೆಹಲಿ : ದೇಶದ ಬೇರೆ ಬೇರೆ ರಾಜ್ಯಗಳಿಂದ ರೈತರು ಇಂದು ದೆಹಲಿಯಲ್ಲಿ ಜಮಾಯಿಸುತ್ತಿದ್ದಾರೆ. ವಿವಿಧ ರೈತ ಸಂಘಟನೆಗಳ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೃಷಿ ಉತ್ಪನ್ನಗಳ ಕನಿಷ್ಠ
Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ