Kornersite

Bengaluru Just In Karnataka Politics State

Congress: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್!

Bangalore : ನೂತನ ಸಿಎಂ ಎಂದು ಸಿದ್ದರಾಮಯ್ಯ (Siddaramaiah) ಹೆಸರು ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್‌ ನಾಯಕರು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thaawarchand Gehlot) ಅವರಿಗೆ ಸರ್ಕಾರ ರಚನೆಯ ಹಕ್ಕು ಮಂಡಿಸಿದರು.

ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಸಿಎಲ್‌ಪಿ ಸಭೆ ನಡೆಸಿದ ನಂತರ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ (DK Shivakumar) ಅವರು ರಾಜ್ಯಪಾಲರಿಗೆ ಸರ್ಕಾರ ರಚನೆ ಹಕ್ಕು ಮಂಡಿಸಿದರು. ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ, ಶಾಸಕ ರಾಮಲಿಂಗ ರೆಡ್ಡಿ, ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ಸೇರಿದಂತೆ ಹಲವರು ಇದ್ದರು.
ಸಿಎಂ ಗಾದಿಗಾಗಿ ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ಗುದ್ದಾಟ ಶುರುವಾಗಿತ್ತು. ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಪಟ್ಟು ಹಿಡಿದಿದ್ದರು. ಕೆಲವು ಷರತ್ತುಗಳೊಂದಿಗೆ ಕೊನೆಗೂ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಲು ಡಿಕೆಶಿ ಒಪ್ಪಿಗೆ ಸೂಚಿಸಿದರು.

ಸಿದ್ದರಾಮಯ್ಯ ಸಿಎಂ ಎಂಬುವುದು ಖಚಿತವಾಗುತ್ತಿದ್ದಂತೆ ಇತ್ತ ಡಾ. ಪರಮೇಶ್ವರ್‌ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರ ಮುಂದೆ ಸರ್ಕಾರ ರಚನೆ ಕುರಿತು ಮಾಹಿತಿ ನೀಡಿದರು. ಮೇ 20ರಂದು ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌ ನಾಯಕರು ಸೇರಿದಂತೆ ವಿವಿಧ ರಾಜ್ಯಗಳ ಸಿಎಂಗಳನ್ನು ಈ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು