Bangalore : ಬೆಲೆ ಇಳಿಕೆಯ ವಿಷಯದಲ್ಲಿ ಚಿನ್ನ ಹಾಗೂ ಬೆಳ್ಳಿಯ ಮದ್ಯೆ ದೊಡ್ಡ ಫೈಟ್ ಏರ್ಪಟ್ಟಂತೆ ಕಾಣುತ್ತಿದೆ. ಚಿನ್ನದ ಬೆಲೆ ಸದ್ಯ ಸತತವಾಗಿ ಇಳಿಕೆ ಕಾಣುತ್ತಿದೆ.
ಕಳೆದ 10 ದಿನಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗುತ್ತಿರುವುದು ಇದು 4ನೇ ಬಾರಿ. ಈ 10 ದಿನದಲ್ಲಿ 10 ಗ್ರಾಂ ಚಿನ್ನದ ಬೆಲೆ 600 ರೂ.ನಷ್ಟು ಇಳಿದಿದೆ. ಬೆಳ್ಳಿ ಬೆಲೆಯಲ್ಲಿ 10 ದಿನಗಳಲ್ಲಿ ಒಂದು ದಿನ ಮಾತ್ರ ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 56,100 ರೂ. ಆಗಿದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 61,200 ರೂ. ಆಗಿದೆ. 100 ಗ್ರಾಂ ಬೆಳ್ಲಿ ಬೆಲೆ 7,450 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 56,150 ರೂ. ಆಗಿದೆ. ಬೆಳ್ಳಿ ಬೆಲೆ 100 ಗ್ರಾಂಗೆ 7,810 ರೂ. ಇದೆ.
ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 19ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,200 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಮಲೇಷ್ಯಾ: 2,850 ರಿಂಗಿಟ್ (51,929 ರುಪಾಯಿ)
ದುಬೈ: 2215 ಡಿರಾಮ್ (49,861 ರುಪಾಯಿ)
ಅಮೆರಿಕ: 610 ಡಾಲರ್ (50,315 ರುಪಾಯಿ)
ಸಿಂಗಾಪುರ: 828 ಸಿಂಗಾಪುರ್ ಡಾಲರ್ (50,813 ರುಪಾಯಿ)
ಕತಾರ್: 2,280 ಕತಾರಿ ರಿಯಾಲ್ (51,761 ರೂ)
ಓಮನ್: 241 ಒಮಾನಿ ರಿಯಾಲ್ (51,811 ರುಪಾಯಿ)
ಕುವೇತ್: 189 ಕುವೇತಿ ದಿನಾರ್ (50,846 ರುಪಾಯಿ)