Kornersite

Just In Sports

IPL 2023: ಕಿಂಗ್ ಆರ್ಭಟಕ್ಕೆ ಉದಯಿಸದ ಸೂರ್ಯ!

ಹೈದರಾಬಾದ್‌ : ವಿರಾಟ್ ಕೊಹ್ಲಿ (Virat Kohli), ಫಾಫ್‌ ಡು ಪ್ಲೆಸಿಸ್‌ (Faf du Plessis) ಸ್ಫೋಟಕ ಆಟಕ್ಕೆ ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ವಿರುದ್ಧ 8 ವಿಕೆಟ್‌ ಗಳ ಸೋಲು ಅನುಭವಿಸಿದೆ.

ಈ ಜಯದ ಮೂಲಕ 14 ಅಂಕ ಪಡೆದು +0.180 ರನ್‌ ರೇಟ್‌ನೊಂದಿಗೆ 4ನೇ ಸ್ಥಾನಕ್ಕೆ ಜಿಗಿದಿದೆ. ಇದರಿಂದ ಪ್ಲೇ ಆಫ್‌ ಹಾದಿ ಮತ್ತಷ್ಟು ಸುಗಮವಾಗಿಸಿಕೊಂಡಿದೆ. ಲಕ್ನೋ ಸೂಪರ್‌ ಜೈಂಟ್ಸ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ಉತ್ತಮ ರನ್‌ ರೇಟ್‌ ನೊಂದಿಗೆ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದು, 4ನೇ ಸ್ಥಾನಕ್ಕಾಗಿ ಆರ್‌ ಸಿಬಿ ಹಾಗೂ ಮುಂಬಯಿ ಇಂಡಿಯನ್ಸ್ ನಡುವೆ ದೊಡ್ಡ ಪೈಪೋಟಿ ನಡೆಯುತ್ತಿದೆ. ಎಲ್ಲ ತಂಡಗಳಿಗೂ ತಲಾ ಒಂದೊಂದು ಪಂದ್ಯ ಬಾಕಿಯಿದೆ. 13 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿರುವ ಮುಂಬಯಿ ಇಂಡಿಯನ್ಸ್‌ 14 ಅಂಕ ಪಡೆದು -0.128 ರನ್‌ರೇಟ್‌ನೊಂದಿಗೆ 5ನೇ ಸ್ಥಾನದಲ್ಲಿದೆ. ಒಂದು ವೇಳೆ ಮುಂದಿನ ಪಂದ್ಯದಲ್ಲಿ ಆರ್‌ಸಿಬಿ ಸೋತು ಮುಂಬೈ ಗೆದ್ದರೆ, ಆರ್‌ಸಿಬಿ ಪ್ಲೇ ಆಫ್‌ನಿಂದ ಹೊರಬೀಳಲಿದೆ. ಗೆದ್ದರಷ್ಟೇ ಪ್ಲೇ ಆಫ್‌ ತಲುಪಲಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಹೈದರಾಬಾದ್‌ ಹೆನ್ರಿಚ್‌ ಕ್ಲಾಸೆನ್‌ (Heinrich Klaasen) ಅವರ ಶತಕದೊಂದಿಗೆ 20 ಓವರ್‌ ಗಳಲ್ಲಿ 186 ರನ್‌ ಗಳಿಸಿತ್ತು. 187 ರನ್‌ ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಆರ್‌ ಸಿಬಿ 19.2 ಓವರ್‌ ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿ ಜಯದ ನಗೆ ಬೀರಿತು. ವಿರಾಟ್‌, ಡುಪ್ಲೆಸಿಸ್‌ 108 ಎಸೆತಗಳಲ್ಲಿ 172 ರನ್‌ಗಳ ಜೊತೆಯಾಟವಾಡಿದರು. ಕೊಹ್ಲಿ 63 ಎಸೆತಗಳಲ್ಲಿ 100 ರನ್‌, ಫಾಫ್‌ ಡು ಪ್ಲೆಸಿಸ್‌ 47 ಎಸೆತಗಳಲ್ಲಿ ಸ್ಫೋಟಕ 71 ರನ್‌, ಕೊನೆಯಲ್ಲಿ ಗ್ಲೇನ್‌ ಮ್ಯಾಕ್ಸ್‌ವೆಲ್‌ 5 ರನ್‌ ಹಾಗೂ ಮೈಕಲ್‌ ಬ್ರೇಸ್‌ವೆಲ್‌ 4 ರನ್‌ ಗಳಿಸಿ ಅಜೇಯರಾಗಿ ಉಳಿದು, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

2016ರ ಐಪಿಎಲ್‌ ಆವೃತ್ತಿಯಲ್ಲಿ 4 ಶತಕಗಳನ್ನು ಸಿಡಿಸಿದ್ದ ಕೊಹ್ಲಿ ‌ಒಂದೇ ಸೀಸನ್‌ನಲ್ಲಿ 973 ರನ್‌ ಗಳಿಸಿ ಯಾರೂ ಮುರಿಯದ ದಾಖಲೆ ಮಾಡಿದ್ದಾರೆ. 2019ರ ಐಪಿಎಲ್‌ನಲ್ಲಿ ಒಂದು ಶತಕ ಗಳಿಸಿದ್ದರು. 2023ರ ಐಪಿಎಲ್‌ ಆವೃತ್ತಿಯಲ್ಲಿ ಮತ್ತೊಮ್ಮೆ ಶತಕ ಸಿಡಿಸಿ ಮಿಂಚಿದರು. ಹೈದರಾಬಾದ್‌ ಒಂದೆಡೆ ವಿಕೆಟ್‌ ಕಳೆದುಕೊಂಡರೆ, ಮತ್ತೊಂದೆಡೆ ರನ್‌ ಕಲೆಹಾಕುತ್ತಾ ಸಾಗಿತು. ಅಭಿಷೇಕ್‌ ಶರ್ಮಾ 11 ರನ್‌, ರಾಹುಲ್‌ ತ್ರಿಪಾಠಿ 15 ರನ್‌, ಏಡನ್‌ ಮಾರ್ಕ್ರಮ್‌ 18 ರನ್‌ ಗಳಿಸಿ ಔಟ್ ಆದರು. ಕ್ಲಾಸೆನ್‌ 51 ಎಸೆತಗಳಲ್ಲಿ 104 ರನ್‌, ಗ್ಲೇನ್‌ ಫಿಲಿಪ್ಸ್‌ 5 ರನ್‌ ಗಳಿಸಿ ಔಟಾದರೆ, ಹ್ಯಾರಿ ಬ್ರೂಕ್‌ 27 ರನ್‌ ಗಳಿಸಿ ಅಜೇಯರಾಗುಳಿದರು.ಆರ್‌ ಸಿಬಿ ಪರ ಮೈಕೆಲ್‌ ಬ್ಲೇಸ್‌ವೆಲ್‌ 2 ವಿಕೆಟ್‌, ಶಹಬಾಜ್‌ ಅಹ್ಮದ್‌, ಹರ್ಷಲ್‌ ಪಟೇಲ್‌, ಮೊಹಮ್ಮದ್‌ ಸಿರಾಜ್‌ ತಲಾ ಒಂದೊಂದು ವಿಕೆಟ್‌ ಪಡೆದರು.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Sports

ಮಾಜಿ ಕ್ರಿಕೆಟಿಗ ಸಲೀಂ ದುರಾನಿ ಇನ್ನಿಲ್ಲ!

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ಆಲ್ ರೌಂಡರ್ ಆಟಗಾರ ಸಲೀಂ ದುರಾನಿ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.1960ರ ದಶಕದಲ್ಲಿ ಭಾರತದ ಆಲ್ ರೌಂಡರ್