Bangalore : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಬಿಜೆಪಿಯ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಸಿಡಿದೆದ್ದು, ಕಾಂಗ್ರೆಸ್(Congress) ಸೇರಿದ್ದ ಜಗದೀಶ ಶೆಟ್ಟರ್ ಗೆ ಕಾಂಗ್ರೆಸ್ ಗೌರವ ಸ್ಥಾನ ನೀಡಲು ಮುಂದಾಗಿದೆ ಎನ್ನಲಾಗಿದೆ.
ಜಗದೀಶ ಶೆಟ್ಟರ್ ಬಿಜೆಪಿ ವಿರುದ್ಧ ಗುಡುಗಿದ್ದರ ಹಿನ್ನೆಲೆಯಲ್ಲಿ ಬಿಜೆಪಿ ಡ್ಯಾಮೇಜ್ ಆಯಿತು ಎನ್ನುವುದು ಕೂಡ ಸತ್ಯವಾದ ಮಾತು. ಈಗಾಗಲೇ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಕೂಡ ಗೆಲುವಿನ ನಗೆ ಬೀರಲು ಮುಂದಾಗಿದೆ. ಹೀಗಾಗಿ ಈಗಿನಿಂದಲೇ ತಯಾರಿ ನಡೆಸಿದೆ. ಸೋತ ಜಗದೀಶ್ ಶೆಟ್ಟರ್(Jagadish Shettar) ಅವರನ್ನು ಮತ್ತೊಂದು ಅಖಾಡಕ್ಕೆ ಅಣಿ ಮಾಡಲು ಚಿಂತನೆ ನಡೆಸಿದೆ. ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿರುವ ಶೆಟ್ಟರ್ ಅವರ ಮೂಲಕ ಲಿಂಗಾಯತ ಅಸ್ತ್ರ ಬಳಸು ಕೈ ಪಡೆ ತಂತ್ರರೂಪಿಸಿದೆ. ಹೀಗಾಗಿ ಶೆಟ್ಟರ್ ಅವರಿಗೆ ಮಹತ್ವದ ಹುದ್ದೆ ನೀಡಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ.
ಜಗದೀಶ ಶೆಟ್ಟರ್, ಶಿಷ್ಯ ಮಹೇಶ ಟೆಂಗಿನಕಾಯಿ ವಿರುದ್ಧ ಸೋಲುಂಡಿದ್ದಾರೆ. ಇದು ನನ್ನ ಕೊನೆಯ ಚುನಾವಣೆ ಎಂದಿದ್ದ ಶೆಟ್ಟರ್, ನನಗಿನ್ನೂ ವಯಸ್ಸಾಗಿಲ್ಲ ಎನ್ನುವ ಮೂಲಕ ಮುಂದಿನ ರಾಜಕೀಯ ನಡೆಯ ಬಗ್ಗೆ ಕುತೂಹಲ ಮೂಡಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಕಣಕ್ಕೆ ಇಳಿಸಲು ತೆರೆಮರೆಯ ಕಸರತ್ತು ನಡೆದಿದೆ ಎಂದು ತಿಳಿದುಬಂದಿದೆ. ಹೀಗಾಗಿ ಶೆಟ್ಟರ್ ಗೆ ಸಿದ್ದು ಕ್ಯಾಬಿನೆಟ್ ನಲ್ಲಿ ಸ್ಥಾನ ಕಲ್ಪಿಸಲು ಕಾಂಗ್ರೆಸ್ ಮುಂದಾಗಿದೆ.
ಬಿಜೆಪಿ ನಾಯಕರ ವಿರುದ್ಧ ಗುಡುಗಿ ಕಾಂಗ್ರೆಸ್ ಸೇರ್ಪಡೆಯಾಗಿರುವ ಜಗದೀಶ್ ಶೆಟ್ಟರ್ ಅವರನ್ನು ಗೌರವಿತವಾಗಿ ನಡೆಸಿಕೊಳ್ಳಲು ಕಾಂಗ್ರೆಸ್ ಸಹ ಮುಂದಾಗಿದೆ. ಶೆಟ್ಟರ್ ಸೋತ ಬಳಿಕ ಅವರ ನಿವಾಸಕ್ಕೆ ಕಾಂಗ್ರೆಸ್ ಹಿರಿಯ ನಾಯಕರ ಭೇಟಿ ನೀಡಿ ಧೈರ್ಯ ಹೇಳಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಕೊಪ್ಪಳ, ವಿಜಯಪುರ ಸೇರಿದಂತೆ ಹಲವೆಡೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಿ ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ. ಇದರಿಂದ ಸೋತಿರುವ ಜಗದೀಶ್ ಶೆಟ್ಟರ್ ಅವರನ್ನು ಮುಂದಿನ ಚುನಾವಣೆಗಳಲ್ಲಿ ಸಮರ್ಪಕವಾಗಿ ಬಳಸಿಕೊಳ್ಳಲು ಅವರಗೆ ಮಹತ್ವದ ಹುದ್ದೆ ನೀಡುವ ಸಾಧ್ಯತೆಗಳು ಎನ್ನಲಾಗುತ್ತಿದೆ.