Kornersite

Just In National

ಹಲ್ಲಿ ಬಿದ್ದ ಆಹಾರ ಸೇವಿಸಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳು!

ಪಾಟ್ನಾ: ಬಿಹಾರದ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗಾಗಿ ಸಿದ್ಧವಾಗಿದ್ದ ಬಿಸಿಯೂಟದಲ್ಲಿ ಹಲ್ಲಿ ಬಿದ್ದು, ಆಹಾರ ಸೇವಿಸಿದ 36 ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಮಾಡುವ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯೊಬ್ಬ ತನ್ನ ತಟ್ಟೆಯಲ್ಲಿ ಹಲ್ಲಿ ಇರುವುದನ್ನು ಕಂಡು ತಕ್ಷಣ ಶಿಕ್ಷಕರಿಗೆ ಮಾಹಿತಿ ನೀಡಿದ್ದಾನೆ. ನಂತರ ಶಾಲೆಯು ಮಧ್ಯಾಹ್ನದ ಊಟವನ್ನು ಸ್ಥಗಿತಗೊಳಿಸಲಾಗಿದೆ.

ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ ವಿದ್ಯಾರ್ಥಿಗಳನ್ನು ತಕ್ಷಣವೇ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, 36 ವಿದ್ಯಾರ್ಥಿಗಳು ಈಗ ಅಪಾಯದಿಂದ ಪಾರಾಗಿದ್ದಾರೆ ಎಂದು ಸದರ್ ಆಸ್ಪತ್ರೆಯ ವೈದ್ಯ ಡಾ.ಸಂತೋಷ್ ಹೇಳಿದ್ದಾರೆ. 40 ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಸೇವಿಸಿದ್ದಾರೆ, ಅದರಲ್ಲಿ 36 ಮಂದಿ ಅಸ್ವಸ್ಥರಾಗಿದ್ದಾರೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ಸರಬರಾಜು ಮಾಡುವ ಎನ್‌ಜಿಒ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

You may also like

National

ರಾಮಲೀಲಾ ಮೈದಾನದಲ್ಲಿ ಜಮಾಯಿಸುತ್ತಿರುವ ರೈತರು

ನವದೆಹಲಿ : ದೇಶದ ಬೇರೆ ಬೇರೆ ರಾಜ್ಯಗಳಿಂದ ರೈತರು ಇಂದು ದೆಹಲಿಯಲ್ಲಿ ಜಮಾಯಿಸುತ್ತಿದ್ದಾರೆ. ವಿವಿಧ ರೈತ ಸಂಘಟನೆಗಳ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೃಷಿ ಉತ್ಪನ್ನಗಳ ಕನಿಷ್ಠ
Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ