Shimla : ರಾಜಸ್ಥಾನ್ ರಾಯಲ್ಸ್ ತಂಡವು ಶಿಮ್ರಾನ್ ಹೆಟ್ಮೇಯರ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕಲ್ ಸ್ಫೋಟಕ ಬ್ಯಾಟಿಂಗ್ ಬ್ಯಾಟಿಂಗ್ ನಿಂದಾಗಿ ಪಂಜಾಬ್ ಕಿಂಗ್ಸ್ ವಿರುದ್ಧ 4 ವಿಕೆಟ್ ಗಳ ರೋಚಕ ಜಯ ಸಾಧಿಸಿ ಪ್ಲೇ ಆಫ್ ಕನಸು ಜೀವಂತವಾಗಿಸಿಕೊಂಡಿದೆ. ಪಂಜಾಬ್ ಈ ಸೋಲಿನಿಂದಾಗಿ ಟೂರ್ನಿಯಿಂದ ಹೊರ ಬಿದ್ದಿದೆ.
ಗೆಲುವು ಸಾಧಿಸುವ ಮೂಲಕ ರಾಜಸ್ಥಾನ್ 14 ಅಂಕ ಪಡೆದು +0.148 ರನ್ರೇಟ್ನೊಂದಿಗೆ 5ನೇ ಸ್ಥಾನಕ್ಕೆ ಜಿಗಿದಿದೆ. ಒಂದು ವೇಳೆ ಭಾನುವಾರದ ಪಂದ್ಯದಲ್ಲಿ ಆರ್ ಸಿಬಿ ಹಾಗೂ ಮುಂಬಯಿ ತಂಡಗಳು ಸೋತರೆ ರಾಜಸ್ಥಾನ್ ರಾಯಲಸ್ ಗೆ ಪ್ಲೇ ಆಫ್ ತಲುಪುವ ಅವಕಾಶ ಸಿಗಲಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕಿಂಗ್ಸ್ ಪಂಜಾಬ್ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತ್ತು. ಬೃಹತ್ ಮೊತ್ತದ ಗುರಿ ಪಡೆದ ರಾಜಸ್ಥಾನ್ ರಾಯಲ್ಸ್ 19.4 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿ ಗೆಲುವು ಸಾಧಿಸಿತು.
ಶಿಮ್ರಾನ್ ಹೆಟ್ಮೇಯರ್ 28 ಎಸೆತಗಳಲ್ಲಿ ಭರ್ಜರಿ 46 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಚೇಸಿಂಗ್ ಆರಂಭಿಸಿದ ರಾಜಸ್ಥಾನ್ ರಾಯಲ್ಸ್ ಮೊದಲ ವಿಕೆಟ್ ಕಳೆದುಕೊಂಡರೂ 2 ವಿಕೆಟ್ಗೆ ಉತ್ತಮ ಆರಂಭ ಪಡೆಯಿತು. 2ನೇ ವಿಕೆಟ್ಗೆ ಜೊತೆಯಾದ ದೇವದತ್ ಪಡಿಕಲ್ ಹಾಗೂ ಯಶಸ್ವೀ ಜೈಸ್ವಾಲ್ ಭರ್ಜರಿ ಅರ್ಧ ಶತಕ ಸಿಡಿಸಿ ಔಟಾದರು.
ಜೈಸ್ವಾಲ್ 36 ಎಸೆತಗಳಲ್ಲಿ 8 ಬೌಂಡರಿಗಳೊಂದಿಗೆ 50 ರನ್ ಗಳಿಸಿದರು. ಪಡಿಕಲ್ 30 ಎಸೆತಗಳಲ್ಲಿ 51 ರನ್ ಗಳಿಸಿದರು. ನಾಯಕ ಸಂಜು ಸ್ಯಾಮ್ಸನ್ ಕೇವಲ 2 ರನ್ ಗಳಿಸಿ ನಿರಾಸೆ ಮೂಡಿಸಿದರು. ರಿಯಾನ್ ಪರಾಗ್ 12 ಎಸೆತಗಳಲ್ಲಿ 2 ಸಿಕ್ಸರ್, 1 ಬೌಂಡರಿಯೊಂದಿಗೆ 20 ರನ್ ಗಳಿಸುವ ಮೂಲಕ ತಂಡಕ್ಕೆ ಇನ್ನಷ್ಟು ರನ್ ಕೊಡುಗೆ ನೀಡಿದರು. ರಾಜಸ್ಥಾನ್ ಪರ ನವದೀಪ್ ಸೈನಿ 3, ಟ್ರೆಂಟ್ ಬೋಲ್ಟ್ ಹಾಗೂ ಆಡಂ ಜಂಪಾ ತಲಾ ಒಂದೊಂದು ವಿಕೆಟ್ ಪಡೆದರು.