Kornersite

Bengaluru Just In Karnataka Politics State

Ramalinga Reddy: 8 ಬಾರಿ ಶಾಸಕರಾಗಿರುವ ಹಿರಿಯ ನಾಯಕನಿಗೆ ಒಲಿದು ಬಂದ ಸಚಿವ ಸ್ಥಾನ

Bangalore : 8 ಬಾರಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿರುವ ರಾಮಲಿಂಗಾರೆಡ್ಡಿ(Ramalinga Reddy) ಅವರಿಗೆ ಈಗ ಮತ್ತೊಮ್ಮೆ ಸಚಿವ ಸ್ಥಾನ ಹುಡುಕಿಕೊಂಡು ಬಂದಿದೆ.

ಸಿದ್ದರಾಮಯ್ಯ(Siddaramaiah) ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಾಜಿ ಗೃಹ ವ್ಯವಹಾರಗಳ ಸಚಿವ, ಸಾರಿಗೆ ಸಚಿವ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವ, ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರೂ ಆಗಿದ್ದ ರಾಮಲಿಂಗಾರೆಡ್ಡಿ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ಒಲಿದುಬಂದಿದೆ.

ಜೂನ್ 12, 1953 ರಂದು ಬೆಂಗಳೂರಿನಲ್ಲಿ ಜನಿಸಿರುವ ರಾಮಲಿಂಗಾರೆಡ್ಡಿಯವರು 1973-74 – ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ದಂತಕಲಾ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದರು. 1989, 1994, 1999, 2004ರಲ್ಲಿ ಜಯನಗರ ವಿಧಾನಸಭಾಕ್ಷೇತ್ರದಿಂದ ಸತತವಾಗಿ ನಾಲ್ಕು ಬಾರಿ ಹಾಗೂ 2008, 2013 ಮತ್ತು 2018, 2023 ರಲ್ಲಿ ಬಿಟಿಎಂ ವಿಧಾನಸಭಾಕ್ಷೇತ್ರದಿಂದ ಸತತವಾಗಿ ನಾಲ್ಕು ಬಾರಿ ಒಟ್ಟು 8 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಮಾಜಿ ಸಿಎಂ ವೀರಪ್ಪ ಮೊಯ್ಲಿ ಸರ್ಕಾರದಲ್ಲಿ ಹಣಕಾಸು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕೃಷಿ ಮಾರುಕಟ್ಟೆ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಎಸ್. ಎಂ. ಕೃಷ್ಣ ಸಚಿವ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ. ಧರ್ಮಸಿಂಗ್ ಸಂಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸಾರಿಗೆ ಮತ್ತು ಗೃಹ ಸಚಿವರಾಗಿದ್ದರು. ಸದ್ಯ ಮತ್ತೊಮ್ಮೆ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು