Kornersite

Bengaluru Just In Karnataka Politics State

Satish Jarakiholi: ಸರಳ ಜೀವಿ, ಮೌಢ್ಯದ ವಿರುದ್ಧ ಸದಾ ಹೋರಾಡುವ ಜಾರಕಿಹೊಳಿಗೆ ಸಚಿವ ಸ್ಥಾನ!

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಬರೋಬ್ಬರಿ 5ನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಸದಾ ಮೌಢ್ಯತೆ ವಿರುದ್ಧ ಸಮರವನ್ನು ಮಾನವ ಬಂಧುತ್ವ ವೇದಿಕೆಯ ಮೂಲಕ ರಾಜ್ಯಾದ್ಯಂತ ಮೂಢನಂಬಿಕೆ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಸತೀಶ್ ಜಾರಕಿಹೊಳಿ ಅಪರೂಪದ ರಾಜಕಾರಣಿ‌. ಸಿದ್ದರಾಮಯ್ಯ ಕಟ್ಟಾ ಶಿಷ್ಯ ಎಂದೇ ಗುರುತಿಸಿಕೊಂಡಿರುವ ಸತೀಶ್ ಜಾರಕಿಹೊಳಿ ರಾಜಕೀಯ ಜೀವನವೇ ವಿಭಿನ್ನ.

1992ರ ಗೋಕಾಕ್ ನಗರಸಭೆ ಚುನಾವಣೆಯಲ್ಲಿ ತಮ್ಮ ಬೆಂಬಲಿಗರನ್ನು ಪಕ್ಷೇತರ ಅಭ್ಯರ್ಥಿಗಳಾಗಿ ಚುನಾವಣೆಗೆ ನಿಲ್ಲಿಸಿ ಗೆಲುವ ಸಾಧಿಸಿದ ವ್ಯಕ್ತಿ. ಆ ಮೂಲಕವೇ ಅವರು ರಾಜಕೀಯ ರಂಗಕ್ಕೆ ಕಾಲಿಟ್ಟವರು. 1992 ರಿಂದ 1994ರವರೆಗೆ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. 1993ರಿಂದ 1995ರವರೆಗೆ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕರಾಗಿದ್ದರು. 1998ರಲ್ಲಿ ಪ್ರಥಮ ಬಾರಿ ಬೆಳಗಾವಿ ಜಿಲ್ಲಾ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಮೊದಲ ಬಾರಿ ವಿಧಾನ ಪರಿಷತ್ ಸದಸ್ಯರಾದರು.

2004ರಲ್ಲಿ ಎರಡನೇ ಬಾರಿಗೆ ಜೆಡಿಎಸ್‌ನಿಂದ ವಿಧಾನ ಪರಿಷತ್ ಸದಸ್ಯರಾಗಿ ಪುನರಾಯ್ಕೆಯಾದರು. ಆಗ ಜವಳಿ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಜೊತೆ ಆತ್ಮೀಯ ಒಡನಾಟ ಹೊಂದಿದ್ದ ಸತೀಶ್ ಜಾರಕಿಹೊಳಿ ಅವರು 2005ರಲ್ಲಿ ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಐತಿಹಾಸಿಕ ಅಹಿಂದ ಸಮಾವೇಶದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

2006ರಲ್ಲಿ ಸಿದ್ದರಾಮಯ್ಯ ಜೊತೆಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಸತೀಶ್ ಜಾರಕಿಹೊಳಿ 2008ರಲ್ಲಿ ಕ್ಷೇತ್ರ ಪುನರ್‌ವಿಂಗಡನೆ ಬಳಿಕ ಯಮಕನಮರಡಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದರು. 2008, 2013, 2018 ಹಾಗೂ 2023ರಲ್ಲಿ ಸತತವಾಗಿ 4 ಬಾರಿ ಗೆಲುವು ಸಾಧಿಸಿದ್ದಾರೆ. 2018ರ ಚುನಾವಣೆಯಲ್ಲಿ ರಾಹುಕಾಲದಲ್ಲಿ ಚುನಾವಣೆ ನಾಮಪತ್ರ ಸಲ್ಲಿಸಿ, ಕ್ಷೇತ್ರದಲ್ಲಿ ಪ್ರಚಾರ ನಡೆಸದೇ ವಿಜಯ ಸಾಧಿಸಿದ್ದರು.
ಸಿದ್ದರಾಮಯ್ಯ ಸರ್ಕಾರದಲ್ಲಿ ಅಬಕಾರಿ ಹಾಗೂ ಸಣ್ಣ ಕೈಗಾರಿಕೆ ಸಚಿವರಾಗಿ ಸೇವೆ, 2018 ರಿಂದ 2019 ರವರೆಗೆ ಸಮ್ಮಿಶ್ರ ಸರ್ಕಾರದಲ್ಲಿ ಅರಣ್ಯ ಮತ್ತು ಪರಿಸರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. 2019ರಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಕಡಿಮೆ ಅಂತರದಿಂದ ಸೋಲನುಭವಿಸಿದ್ದರು.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು