Bangalore : ಸಿಎಂ ಆಗಿ ಸಿದ್ದರಾಮಯ್ಯ(Siddaramaiah) ನಗರದ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನರ ಆಶೀರ್ವಾದಿಂದ ನಮ್ಮ ಸರ್ಕಾರ ಬಂದಿದೆ. ರಾಹುಲ್ ಗಾಂಧಿ, ಖರ್ಗೆ, ಪ್ರಿಯಾಂಕಾ ಸೇರಿ ಅನೇಕರು ಪ್ರಚಾರ ಮಾಡಿದರು, ಪಕ್ಷದ ಪರ ಪ್ರಚಾರ ಮಾಡಿದ ಎಲ್ಲರಿಗೂ ಧನ್ಯವಾದಗಳು. ಜೊತೆಗೆ ನಾವು ಕೊಟ್ಟ ಐದು ಗ್ಯಾರಂಟಿಗಳನ್ನು ಇಂದೇ ಅನುಮೋದನೆ ನೀಡುತ್ತೇನೆ ಎನ್ನುವ ಮೂಲಕ ರಾಜ್ಯದ ಜನರಿಗೆ ಕೊಟ್ಟ ಭರವಸೆ ಈಡೇರಿಸಿದ್ದಾರೆ.
ವಿವಿಧ ರಾಜ್ಯಗಳ ನಾಯಕರು ನಮಗೆ ಶುಭ ಹಾರೈಸಲು ಬಂದಿದ್ದಾರೆ. ರಾಜ್ಯದ ಜನರ ನಿರೀಕ್ಷೆಗೆ ತಕ್ಕಂತೆ ನಾವು ಆಡಳಿತ ನಡೆಸುತ್ತೇವೆ. ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುವ ಮೂಲಕ ಜನರಿಗೆ ನಾವು ನೀಡಿದ ಭರವಸೆ ಈಡೇರಿಸುತ್ತೇವೆ. ನಾವು ನುಡಿದಂತೆ ನಡೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸಿಎಂ, ಡಿಸಿಎಂ ಇಬ್ಬರು ಒಂದೇ ಕಾರಿನಲ್ಲಿ ವಿಧಾನಸೌಧಕ್ಕೆ ತೆರೆಳಿದರು. ಉಪ ಮುಖ್ಯಮಮತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಎಂಟು ಜನ ಶಾಸಕರು ಸಚಿವರಾಗಿಯೂ ಪದಗ್ರಹಣ ಮಾಡಿದರು.