Kornersite

Bengaluru Just In Karnataka Politics State

ಸಿದ್ದರಾಮಯ್ಯ ಪದಗ್ರಹಣ ಕಾರ್ಯಕ್ರಮ; ಬೆಳಿಗ್ಗೆಯೇ ನೂಕುನುಗ್ಗಲು!

Bangalore : ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ Siddaramaiah) ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಜೊತೆ 8 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹೀಗಾಗಿ ಕಂಠೀರವ ಸ್ಟೇಡಿಯಂ (Kanteerava Stadium) ನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಿದ ಅಭಿಮಾನಿಗಳಿಂದ ನೂಕುನುಗ್ಗಲು ಉಂಟಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (ಮಧ್ಯಾಹ್ನ 12.30ರ ಸುಮಾರಿಗೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳ ದಂಡು ಹರಿದುಬಂದಿದೆ. ಸದ್ಯ ಸ್ಟೇಡಿಯಂನ ಪ್ರವೇಶ ದ್ವಾರ ತೆರೆಯಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಜನ ಒಳಗಡೆ ನುಗ್ಗಿದ್ದಾರೆ. ಸಾರ್ವಜನಿಕರನ್ನು ಕಂಟ್ರೋಲ್ ಮಾಡಲು ಪೊಲೀಸರ ಹರಸಾಹಸ ಪಡುವಂತಾಯಿತು. ತಳ್ಳಾಟದಲ್ಲಿ ಒಬ್ಬರು ಅಸ್ವಸ್ಥರಾಗಿ ಕೆಳಗಡೆ ಬಿದ್ದ ಪ್ರಸಂಗ ನಡೆದಿದೆ. ಓರ್ವ ಪೊಲೀಸ್‍ಗೂ ಗಾಯಗಳಾಗಿದೆ. ಕೂಡಲೇ ಪೊಲೀಸರು ಗಾಯಾಳುಗಳನ್ನು ಎತ್ತಿಕೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹೊರಭಾಗದಲ್ಲಿ ಅಭಿಮಾನಿ, ಕಾರ್ಯಕರ್ತರು ಸಿದ್ದರಾಮಯ್ಯ ಅವರಿಗೆ ಜೈಕಾರ ಹಾಕಿ ಸಂಭ್ರಮಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿಕೆಶಿಯ ಆಳೆತ್ತರದ ಕಟೌಟ್ ಹಾಕಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು