Mandya : ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮತ್ತು ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಶಾಸಕರು ಮತ್ತು ಅತಿಥಿಗಳು ರಾಜಧಾನಿಗೆ ಆಗಮಿಸಿದ್ದಾರೆ. ಇದರ ನಡುವೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸರಳತೆ ಪ್ರದರ್ಶಿಸಿ ಎಲ್ಲರ ಗಮನ ಸೆಳೆದಿದ್ದಾರೆ.
ದರ್ಶನ್ ಪುಟ್ಟಣ್ಣಯ್ಯ ಅವರು ಪ್ರಮಾಣ ವಚನ ಕಾರ್ಯಕ್ರಮಕ್ಕೆ ರೈಲಿನಲ್ಲಿ ಆಗಮಿಸುವ ಮೂಲಕ ಸರಳತೆ ಮೆರೆದಿದ್ದಾರೆ. ರಾತ್ರಿಯೇ ಮಂಡ್ಯದಿಂದ ಸಾಮಾನ್ಯ ಪ್ರಜೆಯಂತೆ ಅವರು ರೈಲಿನ ಮೂಲಕ ಆಗಮಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಆಹ್ವಾನದ ಮೇರೆಗೆ ದರ್ಶನ್, ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ್ದಾರೆ.
ದರ್ಶನ್ ಪುಟ್ಟಣ್ಣಯ್ಯ ಅವರು ಪುಟ್ಟರಾಜು ವಿರುದ್ಧ ಜಯ ದಾಖಲಿಸಿದ್ದಾರೆ. ಸರ್ವೋದಯ ಕರ್ನಾಟಕ ಪಕ್ಷದಿಂದ ದರ್ಶನ್ ಸ್ಪರ್ಧಿಸಿದ್ದರು. ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಕಾಂಗ್ರೆಸ್ ಬೆಂಬಲ ನೀಡಿತ್ತು. ಹೀಗಾಗಿ ದರ್ಶನ್ ಪುಟ್ಟಣಯ್ಯ ಇದೇ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದು, ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.