Bangalore : ನಮ್ಮಲ್ಲಿ ಬಣ ರಾಜಕೀಯ ಇಲ್ಲ, ಕಾಂಗ್ರೆಸ್ ಹೈಕಮಾಂಡ್ (Congress High Command) ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಎಂ.ಬಿ. ಪಾಟೀಲ್ (MB Patil) ಹೇಳಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಪ್ರಮಾಣ ವಚನ (Swearing-In Ceremony) ಸ್ವೀಕರಿಸಲಿರುವ ಅವರು, ನನಗೆ ಇದೇ ಖಾತೆ ಬೇಕು ಎಂದು ಬೇಡಿಕೆ ಇಡುವುದಿಲ್ಲ. ಹೈಕಮಾಂಡ್ ಅಳೆದು ತೂಗಿ ಹಂಚಿಕೆ ಮಾಡಿದೆ. ಸಿಎಂ ಯಾವ ಖಾತೆ ಕೊಡುತ್ತದೆಯೋ ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ.
ಲಿಂಗಾಯತರಿಗೆ ಡಿಸಿಎಂ ಸ್ಥಾನ ನೀಡುವ ವಿಚಾರವಾಗಿ ಮಾತನಾಡಿದ ಅವರು, ಮುಸ್ಲಿಂ ಹಾಗೂ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡಿದ್ದಾರೆ.. ಹೈಕಮಾಂಡ್ ಈ ಬಗ್ಗೆ ಯೋಚನೆ ಮಾಡಲಿದೆ. 4 ವರ್ಷದಲ್ಲಿ ಬಿಜೆಪಿ ಎಲ್ಲವನ್ನೂ ಹಾಳು ಮಾಡಿದ್ದು ಸರಿ ಮಾಡುವ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.