Bangalore : ಸಿಎಂ ಸಿದ್ದರಾಮಯ್ಯ (Siddaramaiah) ಅವರ ಮೊಮ್ಮಗ ದಿ. ರಾಕೇಶ್ ಸಿದ್ದರಾಮಯ್ಯ ಅವರ ಪುತ್ರ ಧವನ್ ರಾಕೇಶ್ (Dhavan Rakesh) 12ನೇ ತರಗತಿಯಲ್ಲಿ ತೇರ್ಗಡೆ ಹೊಂದಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ.
ಅಲ್ಲದೇ, ಸಿದ್ದರಾಮಯ್ಯ ಅವರಿಂದಲೇ ಪ್ರಮಾಣಪತ್ರವನ್ನು ಮೊಮ್ಮಗ ಪಡೆದಿದ್ದಾನೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನನ್ನ ಮೊಮ್ಮಗ 12ನೇ ತರಗತಿ ಪೂರ್ಣಗೊಳಿಸಿದ್ದಾನೆ. ಬೆಂಗಳೂರಿನ ಕೆನಡಿಯನ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಲಾಯಿತು. ಈ ಕಾರ್ಯಕ್ರಮದ ಭಾಗವಾಗಿದ್ದು, ನನಗೆ ತುಂಬಾ ಸಂತೋಷವಾಯಿತು. 12ನೇ ತರಗತಿ ಪೂರ್ಣಗೊಳಿಸಿದ್ದಕ್ಕಾಗಿ ಧವನ್ ರಾಕೇಶ್‌ನನ್ನ ಅಭಿನಂದಿಸುತ್ತೇನೆ ಎಂದು ಶುಭಾಶಯ ಕೋರಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಧವನ್ ರಾಕೇಶ್ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದ. ಧವನ್‍ಗೆ ರಾಜಕೀಯದ ಬಗ್ಗೆ ಬಹಳ ಆಸಕ್ತಿ ಇದೆ. ನಾಮಪತ್ರ ಸಲ್ಲಿಕೆ, ಪ್ರಚಾರ ವೈಖರಿ ಎಲ್ಲವನ್ನೂ ತಿಳಿದುಕೊಳ್ಳಲು ಸ್ವತಃ ಆಸಕ್ತಿಯಿಂದ ನನ್ನ ಜೊತೆ ಬಂದಿದ್ದಾನೆ ಎಂದು ಹೇಳಿದ್ದರು.

