Kornersite

Bengaluru Just In Karnataka Politics State

CM Siddaramaiah: ಸಭೆ- ಸಮಾರಂಭಗಳಲ್ಲಿ ಹಾರ- ತುರಾಯಿ ಬಳಸದಂತೆ ಸೂಚನೆ!

ಬೆಂಗಳೂರು : ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ನಾನು ಸ್ವೀಕರಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ (Public Programme) ಅನ್ವಯವಾಗಲಿದೆ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಿ. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ ಎಂದು ಟ್ವೀಟ್‌ ಮೂಲಕ ಹೇಳಿದ್ದಾರೆ.

ಕಳೆದ ವರ್ಷ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ರಾಜ್ಯ ಸರ್ಕಾರವೂ ಸರ್ಕಾರಿ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ನೀಡದೆ ಕನ್ನಡ ಪುಸ್ತಕಗಳನ್ನು ನೀಡುವಂತೆ ಆದೇಶ ಹೊರಡಿಸಿತ್ತು. ಸದ್ಯ ನೂತನ ಸಿಎಂ ಸಿದ್ದರಾಮಯ್ಯ ಈ ಆದೇಶ ಹೊರಡಿಸಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು