Raichur : ನೀರು ಕುಡಿಯುವುದಕ್ಕಾಗಿ ನದಿಗೆ ಇಳಿದಿದ್ದ ಬಾಲಕನನ್ನು ಮೊಸಳೆ ಎಳೆದುಕೊಂಡು ಹೋದ ಘಟನೆ ತಾಲೂಕಿನ ಕುರವಕಲಾ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ನವೀನ್(9) ಮೃತ ಬಾಲಕ. ಪೋಷಕರ ಜತೆ ನದಿ ಬಳಿ ಇರುವ ಜಮೀನಿಗೆ ನವೀನ್ ತೆರಳಿದ್ದ. ಈ ಸಂದರ್ಭದಲ್ಲಿ ಪೋಷಕರು ನದಿಗೆ ಹೋಗಿ ಕುಡಿಯಲು ನೀರು ತರಲು ಹೇಳಿದ್ದರು.
ಹೀಗಾಗಿ ನವೀನ್ ಹಾಗೂ ಮತ್ತೊಬ್ಬ ಬಾಲಕ ನದಿಯಲ್ಲಿ ಇಳಿದಿದ್ದಾರೆ. ಬಾಟಲಿಗೆ ನೀರು ತುಂಬಿಸಲು ಮುಂದಾಗುತ್ತಿದ್ದಂತೆ ನವೀನ್ ಮೇಲೆ ಮೊಸಳೆ ದಾಳಿ ಮಾಡಿದೆ. ನವೀನ್ ಜತೆ ಇದ್ದ ಮತ್ತೊಬ್ಬ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇನ್ನು ಬಾಲಕ ನವೀನ್ಗಾಗಿ ಕೃಷ್ಣಾ ನದಿಯಲ್ಲಿ ಶೋಧ ಕಾರ್ಯ ಆರಂಭವಾಗಿದ್ದು, ಯಾಪಲದಿನ್ನಿ ಪೊಲೀಸರು, ಅಗ್ನಿಶಾಮಕ ದಳ ಜೊತೆ ಸ್ಥಳೀಯರಿಂದ ಕಾರ್ಯಾಚರಣೆ ನಡೆದಿದೆ.