Bangalore : ಆಂಧ್ರದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಆಗಮಿಸಿದ್ದ ಮಹಿಳೆ ಮಳೆಗೆ ಸಿಲುಕಿ ಸಾವನ್ನಪ್ಪಿದ್ದು, ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಅವರು 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಮೃತ ಮಹಿಳೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ, ಪರಿಹಾರ ಘೋಷಣೆ ಮಾಡಿದ ಅವರು, ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿ ಆಸ್ಪತ್ರೆ ಸೇರಿರುವವರ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಈಗಷ್ಟೇ ಅಧಿಕಾರಕ್ಕೆ ಬಂದಿದೆ. ನಗರದಲ್ಲಿ ಕೆಲವು ಅವೈಜ್ಞಾನಿಕ ಅಂಡರ್ ಪಾಸ್ಗಳಿವೆ. ಅದನ್ನ ಸರಿಪಡಿಸುವ ಕೆಲಸ ಮಾಡುತ್ತೇವೆ. ಆಸ್ಪತ್ರೆಯಿಂದ ನಿರ್ಲಕ್ಷ್ಯ ಆಗಿದ್ದರೆ, ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ರೋಗಿ ಆಸ್ಪತ್ರೆಗೆ ಬರುವಷ್ಟೊತ್ತಿಗೆ ಮೃತಪಟ್ಟಿದೆ ಎಂದು ವೈದ್ಯರು ಹೇಳಿದ್ದಾರೆ. ತನಿಖೆಯ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕುಟುಂಬವೊಂದರ ಇನ್ಫೋಸಿಸ್ ಉದ್ಯೋಗಿಯಾಗಿದ್ದ ಭಾನುರೇಖಾ ಎಂಬ ಮಹಿಳೆ ಮಳೆಗೆ ಸಿಲುಕಿ ಸಾವನ್ನಪ್ಪಿದ್ದಾರೆ.