Kornersite

Just In National Uttar Pradesh

ರಾಮ ಮಂದಿರದ ಮೊದಲ ಹಂತದ ನಿರ್ಮಾಣ ಈ ವರ್ಷದ ಅಂತ್ಯದಲ್ಲಿ ಪೂರ್ಣ; ಭಕ್ತರಿಗೆ ಅವಕಾಶ

Lucknow: ಇಡೀ ಭಾರತೀಯರೇ ಕನಸು ಕಾಣುತ್ತಿರುವ ಅಯೋಧ್ಯೆ (Ayodhya) ಯಲ್ಲಿ ರಾಮಮಂದಿರ (RamaMandir) ದ ಮೊದಲ ಹಂತದ ನಿರ್ಮಾಣ ಕಾರ್ಯ ಡಿಸೆಂಬರ್ 30ರೊಳಗೆ ಪೂರ್ಣಗೊಳ್ಳಲಿದ್ದು, ಭಕ್ತರಿಗೆ ದರ್ಶನಕ್ಕಾಗಿ ಅನುವು ಮಾಡಿಕೊಡಲಾಗುವುದು ಎಂದು ರಾಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ (Nripendra Mishra) ಹೇಳಿದ್ದಾರೆ.

ಈ ವಿಷಯವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಪ್ರಧಾನ ಕಾರ್ಯದರ್ಶಿ ಮಿಶ್ರಾ ಮಾತನಾಡಿ, ರಾಮ ಮಂದಿರವನ್ನು ಮೂರು ಹಂತಗಳಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ ಭಕ್ತರು ದೇವಾಲಯವನ್ನು ಪ್ರವೇಶಿಸಲು ಸಾಧ್ಯವಾಗುತ್ತದೆ. ಡಿಸೆಂಬರ್ 30 ರೊಳಗೆ ಪೂರ್ಣಗೊಳಿಸಲು ದೇವಸ್ಥಾನದ ಟ್ರಸ್ಟ್ ನಿರ್ಧರಿಸಿದೆ. ಮೊದಲ ಮಹಡಿಯಲ್ಲಿ ಐದು ‘ಮಂಟಪಗಳು ಅತ್ಯಂತ ಪ್ರಮುಖವಾದದ್ದು ಗರ್ಭಗುಡಿ. ಅಲ್ಲಿ ದೇವರ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುತ್ತದೆ. ಸುಮಾರು 160 ಕಂಬಗಳನ್ನು ಬಳಸಲಾಗಿದೆ. ದೇವಾಲಯದ ಕೆಳಗಿನ ಸ್ತಂಭದಲ್ಲಿ ಶ್ರೀರಾಮನ ಸಂಕ್ಷಿಪ್ತ ವಿವರಣೆ ಪ್ರಾರಂಭಿಸಲಾಗುವುದು. ವಿದ್ಯುತ್ ಸೌಲಭ್ಯ ಮತ್ತು ಇತರ ಸೌಲಭ್ಯಗಳನ್ನು ಪೂರ್ಣಗೊಳಿಸಬೇಕು. ಈ ಎಲ್ಲಾ ಕಾಮಗಾರಿಗಳು ಡಿಸೆಂಬರ್ 30 ರೊಳಗೆ ಪೂರ್ಣಗೊಳ್ಳಲಿವೆ ಎಂದು ಹೇಳಿದರು.

You may also like

National

ರಾಮಲೀಲಾ ಮೈದಾನದಲ್ಲಿ ಜಮಾಯಿಸುತ್ತಿರುವ ರೈತರು

ನವದೆಹಲಿ : ದೇಶದ ಬೇರೆ ಬೇರೆ ರಾಜ್ಯಗಳಿಂದ ರೈತರು ಇಂದು ದೆಹಲಿಯಲ್ಲಿ ಜಮಾಯಿಸುತ್ತಿದ್ದಾರೆ. ವಿವಿಧ ರೈತ ಸಂಘಟನೆಗಳ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೃಷಿ ಉತ್ಪನ್ನಗಳ ಕನಿಷ್ಠ
Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ