Kornersite

Bengaluru Just In Karnataka Politics State

DK Shivakumar: ಸಿದ್ದರಾಮಯ್ಯರ ಅದೃಷ್ಟದ ಮನೆಯೂ ನನಗೆ ಬೇಕು; ಡಿಕೆಶಿ!

Bangalore : ಸಿಎಂ ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆಶಿ (DK Sivakumar)ಅವರ ಮಧ್ಯೆ ಸಿಎಂ ಸ್ಥಾನಕ್ಕೆ ದೊಡ್ಡ ಫೈಟ್ ನಡೆದಿತ್ತು. ಈ ಮಧ್ಯೆ ಸಿಎಂ ಸ್ದಾನ ಗೆಲ್ಲುವಲ್ಲಿ ಸಿದ್ದು ಯಶಸ್ವಿಯಾಗಿದ್ದರು. ಡಿಕೆಶಿ ಡಿಸಿಎಂ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದರು. ಆದರೆ, ಅವರಿಗೆ ಯಾವಾಗಲೂ ಅದೃಷ್ಟದ ಮನೆ ಎಂದೇ ಹೇಳಲಾಗುತ್ತಿದ್ದ ಮನೆಯ ಮೇಲೆಯೂ ಈಗ ಡಿಕೆಶಿ ಕಣ್ಣು ಹಾಕಿದ್ದಾರೆ ಎನ್ನಲಾಗಿದೆ.


ಸಿದ್ದರಾಮಯ್ಯ ಅವರು ಹಾಲಿ ಇರುವ ಕುಮಾರಕೃಪಾ (Kumarakrupa GuestHouse) ಅವರ ಅದೃಷ್ಟದ ನಿವಾಸವಾಗಿದೆ. ಈ ಹಿಂದೆ ಸಿಎಂ ಆಗಿದ್ದಾಗಲೂ ಸಿದ್ದರಾಮಯ್ಯ ಈ ನಿವಾಸದಲ್ಲಿಯೇ ಇದ್ದರು. ಆ ಸಂದರ್ಭದಲ್ಲಿ ಅವರು 5 ವರ್ಷ ಯಶಸ್ವಿಯಾಗಿ ಅಧಿಕಾರ ಪೂರೈಸಿದ್ದರು. ಸದ್ಯ ಕೂಡ ಅದೇ ಮನೆಯಲ್ಲಿಯೇ ಇದ್ದಾರೆ. ಆದರೆ, ಅವರು ಕಾವೇರಿ ನಿವಾಸಕ್ಕೆ (Kaveri Guest House) ತೆರಳುತ್ತಿರುವ ಹಿನ್ನೆಲೆಯಲ್ಲಿ ಡಿಕೆಶಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ ಎನ್ನಲಾಗಿದೆ. ತಮ್ಮ ಆಪ್ತರನ್ನು ಕಳುಹಿಸಿ ಸರ್ಕಾರಿ ಬಂಗಲೆ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ಅವರಿಗೆ ಅದೃಷ್ಟ ತಂದ ನಿವಾಸ ನನಗೂ ಅದೃಷ್ಟ ತರುತ್ತದೆ ಎಂಬ ನಿರೀಕ್ಷೆಯಲ್ಲಿ ಅವರು ಇದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ, ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿರುವ ಅವರು, ಈಗ ಅದೃಷ್ಟದ ಮನೆ ಹುಡುಕಿಕೊಂಡು ಹೋಗುತ್ತಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು