Kornersite

Crime Just In Karnataka State

LPG Cylinder: ಸಿಲಿಂಡರ್ ಹೊತ್ತು ಸಾಗುತ್ತಿದ್ದ ಲಾರಿ ಪಲ್ಟಿ; ರಸ್ತೆಯಲ್ಲಿ ಬಿದ್ದ ಸಿಲಿಂಡರ್ ಗಳು!

ಯಾದಗಿರಿ : ಸಿಲಿಂಡರ್‌ ಗಳನ್ನ (LPG Cylinder) ಸಾಗಟ ಮಾಡುತ್ತಿದ್ದ ಲಾರಿ ಪಲ್ಟಿಯಾದ ಪರಿಣಾಮ ರಸ್ತೆ ಪಕ್ಕದಲ್ಲಿಯೇ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಘಟನೆ ನಡೆದಿಲ್ಲ.

ಈ ಘಟನೆ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ಬಳಿಯ ಹುನಗುಂದ- ಸುರಪುರ ರಾಜ್ಯ ಹೆದ್ದಾರಿಯಲ್ಲಿ (Hunagunda Surapua State Highway) ನಡೆದಿದೆ. ಲಾರಿ ಪಲ್ಟಿಯಾಗುತ್ತಿದ್ದಂತೆ ಅದರಲ್ಲಿದ್ದ ಲಾರಿಗಳು ಉರುಳಿ ರಸ್ತೆಯ ಮೇಲೆಯೇ ಬಿದ್ದಿವೆ. ಆದರೆ, ಅದೃಷ್ಟವಶಾತ್ ಯಾವುದೇ ಬೆಂಕಿ ಅವಘಡ ನಡೆದಿಲ್ಲ. ಲಾರಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೆಲವು ಹೊತ್ತು ಸ್ಥಳದಲ್ಲಿ ಆತಂಕ ಸೃಷ್ಟಿಯಾಗಿತ್ತು. ಕೆಂಭಾವಿ ಪಟ್ಟಣದ ಶ್ರೀನಿಧಿ ಗ್ಯಾಸ್ ಏಜೆನ್ಸಿಗೆ ಸೇರಿದ ಸಿಲಿಂಡರ್ ತೆಗೆದುಕೊಂಡು ಹೋಗುತ್ತಿದ್ದಾಗ ಲಾರಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಕೆಂಭಾವಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ