ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಕೆಡಬಾರದು. ನಾಲ್ಕು ವರ್ಷ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಏನೇನ್ ಮಾಡಿದೀರಾ ಅನ್ನೋದು ಗೊತ್ತಿದೆ. ಆ ತಪ್ಪು ರಿಪೀಟ್ ಮಾಡಬೇಡಿ. ಅಕ್ರಮ ಚಟುವಟಿಕೆಗಳ ವಿರುದ್ದ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸಭೆ ನಡೆಸಿದರು. ಈ ವೇಳೆ ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ದ ಕ್ರಮ ಗೈಗೊಳ್ಳಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿದ್ದು ವಾರ್ನಿಂಗ್ ನೀಡಿದ್ದಾರೆ.
ರೌಡಿಸಂ ವಿರುದ್ದ, ಕಾನೂನು ಬಾಹಿರ ಚಟುವಟಿಕೆ ನಡೆಸುವವರ ವಿರುದ್ದ ಕ್ರಮ ಕೈಗೊಳ್ಳಿ. ಅಕ್ರಮ ಕ್ಲಬ್ ನಡೆಸಲು ಅವಕಾಶ ನೀಡಬಾರದು. ಯಾರಿಗೂ ತಾರತಮ್ಯ ಮಾಡದೇ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಿ ಎಂದು ಹೇಳಿದರು.
ಚುನಾವಣೆ ವೇಳೆ ಬಿಜೆಪಿ ವಿರುದ್ದ ಪ್ರಕರಣ ದಾಖಲಿಸದೇ ಇರುವ ವಿಚಾರ ಕೂಡ ಸಭೆಯಲ್ಲಿ ಚರ್ಚೆಯಾಯಿತು. ಸಭೆಯಲ್ಲಿ ಡಿಜಿ ಐಜಿಪಿ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ದಿ, ಸಚಿವರಾದ ಮುನಿಯಪ್ಪ್, ಜಮೀರ್ ಅಹಮದ್ ಖಾನ್, ಎಂ.ಬಿ ಪಾಟೀಲ್, ಕೆ.ಜೆ ಜಾರ್ಜ್ ಭಾಗಿಯಾಗಿದ್ದರು.