ನೀರಿನಲ್ಲಿ ಆಟವಾಆಡುವಾಗ ಮುಳುಗಿ ಮೂವರು ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ಭದ್ರಾ ಜಲಾಶಯದ ಬಲದಂಡೆ ಕಾಲುವೆಯಲ್ಲಿ ನಡೆದಿದೆ.
ನೀರಿನಲ್ಲಿ ಆಟವಾಡುವಾಗ ಆಯಾ ತಪ್ಪಿ ಬಿದ್ದಿದ್ದು, ಒಬ್ಬರ ರಕ್ಷಣೆಗೆ ಮತ್ತೊಬ್ಬರು ಹೋದಾಗ ಮೂವರೂ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ರವಿ (31), ಅನನ್ಯ (17), ಶಾಮವೇಣಿ (16) ಸಾವನ್ನಪ್ಪಿರುವ ದುರ್ದೈವಿಗಳು. ರವಿ ಮೂಲತಃ ಲಕ್ಕವಳ್ಳಿ ನಿವಾಸಿ ಆಹಿದ್ದು, ಇನ್ನು ಅನನ್ಯ, ಶಾಮವೇಣಿ ರವಿಯ ಸಹೋದರಿಯರ ಮಕ್ಕಳು ಆಗಿದ್ದಾರೆ.ಅನನ್ಯ ಶಿವಮೊಗ್ಗ, ಶಾಮವೇಣಿ ನಂಜನಗೂಡಿನವರು ಎಂದು ತಿಳಿದುಬಂದಿದೆ. ಲಕ್ಕವಳ್ಳಿಗೆ ಸಂಬಂಧಿಕರ ಮನೆಗೆ ಬಂದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಸದ್ಯ ಅನನ್ಯ ಮೃತದೇಹ ಪತ್ತೆ ಆಗಿದ್ದು, ಮತ್ತಿಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.ಸದ್ಯ ಈ ಪ್ರಕರಣ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಎನ್ನುವ ಮಾಹಿತಿ ತಿಳಿಬಂದಿದೆ. ಇನ್ನು ಸ್ಥಳಕ್ಕೆ ಎಸ್‌ಪಿ ಉಮಾ ಪ್ರಶಾಂತ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.