ಕಾಂಗ್ರೆಸ್ ರಾಜ್ಯದ ಉಸ್ತುವಾರಿ ರಣ್ ದೀಪ್ ಸಿಂಗ್ ಸುರ್ಜೆವಾಲ (Randeep Singh Surjewala) ನಟ ಶಿವರಾಜ್ ಕುಮಾರ್ (Shivraj Kumar) ಮನೆಗೆ ಭೇಟಿ ನೀಡಿ, ಹಲವು ಗಂಟೆಗಳ ಕಾಲ ಮಾತನಾಡಿದ್ದಾರೆ.
ಈ ಭೇಟಿ ಹಲವಾರು ಅನುಮಾನಗಳನ್ನು ಹುಟ್ಟು ಹಾಕಿದ್ದು, ಸದ್ಯದ ಮಾಹಿತಿಯಂತೆ, ಗೀತಾ (Geetha) ಶಿವರಾಜ್ ಕುಮಾರ್ ಸಹೋದರ ಶಾಸಕ ಮಧು ಬಂಗಾರಪ್ಪ ಮಂತ್ರಿಯಾಗಲಿದ್ದಾರೆ’ ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, ‘ಮಧು ಈ ಸಲ ಗ್ಯಾರಂಟಿ ಮಂತ್ರಿಯಾಗಲಿದ್ದಾರೆ’ ಎಂದು ಭವಿಷ್ಯ ನುಡಿದಿದ್ದರು. ಆದರೆ, ಕಾಂಗ್ರೆಸ್ ಸರಕಾರ ಮೊದಲ ಹಂತದ ಮಂತ್ರಿಗಳ ಪಟ್ಟಿಯಲ್ಲಿ ಮಧು ಬಂಗಾರಪ್ಪ ಹೆಸರನ್ನು ಸೇರಿಸಿರಲಿಲ್ಲ. ಹೀಗಾಗಿ ಸಿಎಂ, ಡಿಸಿಎಂ ಪ್ರಮಾಣ ವಚನ ವೇಳೆ ಮಧು ಗೈರಾಗಿದ್ದರು. ಹೀಗಾಗಿಯೇ ಅವರು ಗೀತಾ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಮಧು ಬಂಗಾರಪ್ಪ (Madhu Bangarappa) ಅವರನ್ನು ಸಮಾಧಾನಿಸಲು ಗೀತಾ ಅವರಿಗೆ ಹೇಳಿದ್ದಾರೆ ಎಂದು ಹೇಳಲಾಗುತ್ತಿದ್ದರೆ, ಮತ್ತೊಂದು ಕಡೆ ಪ್ರಚಾರಕ್ಕೆ ಬಂದಿದ್ದ ಶಿವರಾಜ್ ಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಕ್ಕಾಗಿ ಸುರ್ಜೆವಾಲ ಬಂದಿದ್ದರು ಎಂದು ಹೇಳಲಾಗುತ್ತಿದೆ. ಶಿವರಾಜ್ ಕುಮಾರ್ ಹಲವು ಕ್ಷೇತ್ರಗಳ ಪ್ರಚಾರದಲ್ಲಿ ಭಾಗಿಯಾಗಿದ್ದರು. ಜಗದೀಶ್ ಶೆಟ್ಟರ ಹೊರತು ಪಡಿಸಿ ಶಿವಣ್ಣ ಹೋದ ಕಡೆಗೆ ಕಾಂಗ್ರೆಸ್ ಪಕ್ಷ ಗೆದ್ದಿದೆ. ಹೀಗಾಗಿ ಧನ್ಯವಾದ ಹೇಳಲು ಹೋಗಿದ್ದಾರೆ ಎನ್ನಲಾಗಿದೆ. ಆದರೆ, ಸುರ್ಜೆವಾಲ ಬಂದಿದ್ದ ಕಾರಣವನ್ನು ಶಿವಣ್ಣ ಆಗಲಿ ಅಥವಾ ಕಾಂಗ್ರೆಸ್ ಪಕ್ಷವಾಗಲಿ ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ. ಹೀಗಾಗಿ ಈ ಭೇಟಿ ರಹಸ್ಯವಾಗಿ ಉಳಿದಿದೆ.