Kornersite

Just In National

RBI: ಇಂದಿನಿಂದ 2 ಸಾವಿರ ರೂ. ನೋಟು ವಿನಿಮಯ ಪ್ರಕ್ರಿಯೆ ಆರಂಭ!

2 ಸಾವಿರ ರೂ. ಮುಖ ಬೆಲೆಯ ನೋಟುಗಳನ್ನು (Rs. 2000 Note) ಮಂಗಳವಾರದಿಂದ ಬ್ಯಾಂಕುಗಳಲ್ಲಿ (Bank) ವಿನಿಮಯ ಮಾಡಿಕೊಳ್ಳಲು (Exchange) ಅಥವಾ ಡೆಪಾಸಿಟ್ ಮಾಡಿಕೊಳ್ಳಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ತಿಳಿಸಿದೆ.

2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಎಲ್ಲ ಬ್ಯಾಂಕ್‌ ಗಳಲ್ಲಿ ಬದಲಾಯಿಸಿಕೊಳ್ಳಬಹುದು. ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಯಲ್ಲಿ ನೀವು ನೋಟುಗಳನ್ನು ಬದಲಾಯಿಸಿಕೊಳ್ಳಬಹುದು. ಅದಲ್ಲದೇ ಆರ್‌ಬಿಐನ 19 ಪ್ರಾದೇಶಿಕ ಕಚೇರಿಗಳಲ್ಲಿ ನೀವು 2 ಸಾವಿರ ನೋಟುಗಳನ್ನು ಬದಲಾಯಿಸಿಕೊಳ್ಳಬಹುದು. ನೋಟುಗಳ ವಿನಿಮಯಕ್ಕೆ ಯಾವುದೇ ನಮೂನೆಯನ್ನು ಭರ್ತಿ ಮಾಡುವ ಅಗತ್ಯವಿಲ್ಲ. ಆರ್‌ಬಿಐ ಘೋಷಣೆಯ ಬಳಿಕ ರಿಕ್ವೆಸ್ಟ್ ಫಾರ್ಮ್ ಅನ್ನು ಭರ್ತಿ ಮಾಡಿ ನೋಟು ಬದಲಾವಣೆ ಮಾಡಬೇಕು ಎಂಬ ಸುದ್ದಿ ಹರಿದಾಡಿತ್ತು. ಆದರೆ ಭಾನುವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಲ್ಲ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದು, ಯಾವುದೇ ಫಾರ್ಮ್ ಅನ್ನು ಭರ್ತಿ ಮಾಡುವ ಅಗತ್ಯವಿಲ್ಲ ಎಂದಿದೆ.

ವಿನಿಮಯ ಹಾಗೂ ಠೇವಣಿಗೆ ಗುರುತಿನ ಚೀಟಿ ನೀಡುವ ಅಗತ್ಯವಿಲ್ಲ ಎಂದು ಎಸ್‌ಬಿಐ ಸ್ಪಷ್ಟಪಡಿಸಿದೆ. ಆದ್ದರಿಂದ ನಿರಾತಂಕವಾಗಿ 2,000 ರೂ. ನೋಟು ಬದಲಾಯಿಸಿಕೊಳ್ಳಬಹುದು.ಯಾವುದೇ ಶುಲ್ಕವನ್ನು ಬ್ಯಾಂಕ್‌ಗಳಿಗೆ ಪಾವತಿಸಬೇಕಿಲ್ಲ. ಬ್ಯಾಂಕ್‌ಗಳು ಉಚಿತವಾಗಿಯೇ ನಿಮ್ಮ ನೋಟುಗಳನ್ನು ಬದಲಿಸಿಕೊಡುತ್ತವೆ. ಮೇ 23 ರಿಂದ ಸೆಪ್ಟೆಂಬರ್ 30 ರವರೆಗೂ ನೋಟುಗಳ ವಿನಿಮಯಕ್ಕೆ ಅವಕಾಶ ನೀಡಲಾಗಿದ್ದು, ಈ 4 ತಿಂಗಳ ಗಡುವಿನಲ್ಲಿ ನೋಟುಗಳನ್ನು ಬದಲಿಸಿಕೊಳ್ಳಬಹುದು. ಒಬ್ಬರು ಒಂದು ಬಾರಿ ಗರಿಷ್ಠ 2 ಸಾವಿರ ರೂ. ಮುಖಬೆಲೆಯ 10 ನೋಟುಗಳು ಅಂದರೆ 20 ಸಾವಿರ ರೂ. ಮಾತ್ರ ಬದಲಿಸಿಕೊಳ್ಳಬಹುದು ಎಂದು ಆರ್‌ ಬಿಐ ಹೇಳಿದೆ. ದಿನಕ್ಕೆ ಎಷ್ಟು ಬಾರಿಯಾದರೂ ಬದಲಾಯಿಸಿಕೊಳ್ಳಬಹುದು. ಆದರೆ, ಒಂದು ಬಾರಿಗೆ ಗರಿಷ್ಠ 20,000 ರೂ. ಮಾತ್ರ ಬದಲಾವಣೆಗೆ ಅವಕಾಶ ನೀಡಲಾಗಿದೆ.

You may also like

National

ರಾಮಲೀಲಾ ಮೈದಾನದಲ್ಲಿ ಜಮಾಯಿಸುತ್ತಿರುವ ರೈತರು

ನವದೆಹಲಿ : ದೇಶದ ಬೇರೆ ಬೇರೆ ರಾಜ್ಯಗಳಿಂದ ರೈತರು ಇಂದು ದೆಹಲಿಯಲ್ಲಿ ಜಮಾಯಿಸುತ್ತಿದ್ದಾರೆ. ವಿವಿಧ ರೈತ ಸಂಘಟನೆಗಳ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೃಷಿ ಉತ್ಪನ್ನಗಳ ಕನಿಷ್ಠ
Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ