Kornersite

Bengaluru Just In Karnataka Politics State

ಅಧಿಕಾರಾವಧಿ ಪೂರ್ಣ ಆಗುವವರೆಗೂ ಸಿದ್ದರಾಮಯ್ಯ ಸಿಎಂ; ಎಂ.ಬಿ. ಪಾಟೀಲ್

Mysore : ಸಿದ್ದರಾಮಯ್ಯ(Siddaramaiah) ಅವರೇ ಲೋಕಸಭೆ ಚುನಾವಣೆಯ (LokSabha Elections) ನಂತರವೂ 5 ವರ್ಷಗಳ ಕಾಲ ಸಿಎಂ ಆಗಿ ಇರಲಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್‌ (MB Patil) ಹೇಳಿದ್ದಾರೆ.

ಮೈಸೂರಿನ ಸುತ್ತೂರು ಶ್ರೀಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದ ನಂತರ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ 5 ವರ್ಷ ಪೂರ್ಣಾವಧಿ ಸಿಎಂ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಅಧಿಕಾರ ಹಂಚಿಕೆ ಕುರಿತು ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ನಂತರವೂ ಯಾವುದೇ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಮಾಡುವ ಕುರಿತು ಎಐಸಿಸಿ ಮಟ್ಟದಲ್ಲಿ ಚರ್ಚೆ ಆಗಿಲ್ಲ. ಸಿದ್ದರಾಮಯ್ಯ ಅವರೇ ಮುಂದಿನ 5 ವರ್ಷ ಸಿಎಂ ಆಗಿರಲಿದ್ದಾರೆ. ಈ ಕುರಿತು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್‌ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.

ನಮ್ಮ ಅವಧಿಯಲ್ಲಿ ಬಿಜೆಪಿ ಅಧಿಕಾರವಧಿಯಲ್ಲಿ ನಡೆದ ಎಲ್ಲ ಹಗರಣಗಳ ಕುರಿತು ತನಿಖೆ ನಡೆಸುತ್ತೇವೆ. ಪಿಎಸ್‌ಐ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆಗಳಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು