Bangalore : ಕಾಂಗ್ರೆಸ್ ನ ಹಿರಿಯ ಶಾಸಕ (Congress MLA) ಯುಟಿ ಖಾದರ್ (UT Khader) ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿದೆ.
ಯು.ಟಿ ಖಾದರ್ ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ (Randeep Surjewala) ಮಧ್ಯರಾತ್ರಿ ಕರೆ ಮಾಡಿ ಸ್ಪೀಕರ್ ಹುದ್ದೆ ಸ್ವೀಕರಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಆದೇಶದ ಹಿನ್ನೆಲೆಯಲ್ಲಿ ಖಾದರ್ ಈ ಜವಾಬ್ದಾರಿ ಒಪ್ಪಿಕೊಂಡಿದ್ದು, ಇಂದು ಸ್ಪೀಕರ್ (Speaker) ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಮಂಗಳೂರು ವಿಧಾನಸಭಾ ಕ್ಷೇತ್ರದದಿಂದ ಆಯ್ಕೆಯಾಗಿರುವ ಖಾದರ್ 2007 ರಿಂದ 2012ರವರೆಗೆ ಖಾದರ್ ವಿಪಕ್ಷ ಶಾಸಕರಾಗಿದ್ದರು. 2013ರಲ್ಲಿ ಸಿದ್ಧರಾಮಯ್ಯ ಸರ್ಕಾರದಲ್ಲಿ ಸಚಿವರಾಗಿ 2016ರ ವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ, 2016-18ರ ವರೆಗೆ ಆಹಾರ, ನಾಗರಿಕ ಪೂರೈಕೆ ಖಾತೆ ನಿರ್ವಹಿಸಿದ್ದರು. 2018ರಲ್ಲಿ ವಸತಿ, 2018-19ರವರೆಗೆ ನಗರಾಭಿವೃದ್ಧಿ ಖಾತೆ ನಿಭಾಯಿಸಿದರು. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.