Kornersite

Crime Just In Karnataka State

Accident: ಸಾರಿಗೆ ಬಸ್ ಪಲ್ಟಿ; 7 ಜನರ ಸ್ಥಿತಿ ಗಂಭೀರ!

Belagavi : ಸುಮಾರು 30 ಜನರನ್ನು ಹೊತ್ತು ಸಾಗುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುಳ್ಳೂರು ಘಾಟ್ ನಲ್ಲಿ ನಡೆದಿದೆ.

ಧಾರವಾಡ (Dharwad) ದಿಂದ ಜಮಖಂಡಿಗೆ ತೆರಳುತ್ತಿದ್ದ ಜಮಖಂಡಿ (Jamkhandi) ಡಿಪೋಗೆ ಸೇರಿದ ಕೆಎಸ್‍ಆರ್ ಟಿಸಿ (KSRTC) ಬಸ್ ಪಲ್ಟಿಯಾಗಿದೆ. ಈ ಬಸ್ ನಲ್ಲಿ ಸುಮಾರು 30ಕ್ಕೂ ಅಧಿಕ ಜನರು ಇದ್ದರು ಎನ್ನಲಾಗಿದ್ದು, ಘಟನೆಯಲ್ಲಿ 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಮದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಧಾರವಾಡದಿಂದ ಜಮಖಂಡಿಗೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಾಮದುರ್ಗ ತಾಲೂಕಿನ ಮುಳ್ಳೂರು ಘಾಟನಲ್ಲಿ ಪಲ್ಟಿ ಆಗಿದೆ. ಪ್ರಾಣಾಪಾಯಕ್ಕೆ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸ್ಥಳಕ್ಕೆ ರಾಮದುರ್ಗ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ