Kornersite

Bengaluru Crime Just In Karnataka Politics State

Nayana Motamma: ಶಾಸಕಿ ನಯನಾ ಮೋಟಮ್ಮ ಅವರ ಖಾಸಗಿ ಫೋಟೋ ಲೀಕ್ ಗೆ ನಟ ಗರಂ!

ಚಿಕ್ಕಮಗಳೂರು ಜಿಲ್ಲೆಯ ಮೀಸಲು ಕ್ಷೇತ್ರ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ (Nayana Motamma) ಅವರ ಖಾಸಗಿ ಫೋಟೋಗಳ(Private Photo)ನ್ನು ಅವರ ವಿರೋಧಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದರು. ಸ್ವತಃ ನಯನಾ ಅವರೇ ತಮ್ಮ ಎದುರಾಳಿಗಳಿಗೆ ತಿರುಗೇಟು ನೀಡುವ ಮೂಲಕ ಆ ಫೋಟೋಗಳನ್ನು ತಮ್ಮದೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಪ್ರತ್ಯುತ್ತರ ನೀಡಿದ್ದರು. ಈ ವಿಚಾರವಾಗಿ ನಟ ಚೇತನ್ ಅಹಿಂಸಾ (Chetan Ahimsa) ಪ್ರತಿಕ್ರಿಯೆ ಎಂದು ನಯನಾ ಅವರ ಬೆಂಬಲಕ್ಕೆ ನಿಂತಿದ್ದಾರೆ.

ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಚೇತನ್, ‘ಹೊಸದಾಗಿ ಚುನಾಯಿತ ಶಾಸಕಿ ನಯನಾ ಮೋಟಮ್ಮ ಅವರ ಖಾಸಗಿ ಚಿತ್ರಗಳನ್ನು ಪ್ರಕಟಿಸುವ ಮೂಲಕ ರಾಜಕೀಯ ಪ್ರತಿಸ್ಪರ್ಧಿಗಳು ಅವರ ಗೌರವ ಹತ್ಯೆಗೆ ಯತ್ನಿಸಿದ್ದಾರೆ. ಲ್ಲಾ ಮಹಿಳೆಯರು ವಿವಿಧ ಹಂತಗಳಲ್ಲಿ ಪುರುಷ ಪ್ರಧಾನ ವ್ಯವಸ್ಥೆಗೆ ಬಲಿಪಶುಗಳಾಗಿದ್ದಾರೆ/ ಬಲಿಪಶುಗಳಾಗುತ್ತಿದ್ದಾರೆ. ಅಧಿಕಾರದ ಉನ್ನತ ಸ್ಥಾನಗಳಿಗೆ ಏರುವ ಮಹಿಳೆಯರು ಅದನ್ನು ಸಾರ್ವಜನಿಕ ರೀತಿಯಲ್ಲಿ ಎದುರಿಸುತ್ತಾರೆ. ದೃಢವಾಗಿ ನಿಂತಿರುವ ಶಾಸಕರಿಗೆ ಅಭಿನಂದನೆಗಳು. ಪೊಲೀಸರು ತಪ್ಪು ಮಾಡಿದವರ ವಿರುದ್ಧ ಕ್ರಮ ತಗೆದುಕೊಳ್ಳಬೇಕು’ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ಸ್ವತಃ ನಯನಾ ಅವರ ತಮ್ಮ ಫೋಟೋಗಳನ್ನು ಹೊಂದಿರುವ ವಿಡಿಯೋ ಶೇರ್ ಮಾಡಿ, ‘ಸೋಲಿನ ಹತಾಶೆ ನಿಮ್ಮನ್ನು ಇನ್ನಷ್ಟು ಕಾಡದಿರಲಿ. ಹೌದು, ರಾಜಕೀಯವಾಗಿ ನಾನು, ನನ್ನತನ, ನನ್ನ ವೈಯಕ್ತಿಕ ಜೀವನ ಇವೆಲ್ಲದರ ವ್ಯತ್ಯಾಸ ತಿಳಿಯದ ಅವಿವೇಕಿಗಳಿಗೆ ಉತ್ತರವಿದು’ ಎಂದು ವಿಡಿಯೋ ಜೊತೆ ಬರೆದಿದ್ದಾರೆ. ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿಯಾಗಿರುವ ನಯನಾ, ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಮೀಸಲು ಕ್ಷೇತ್ರದಿಂದ ಗೆದ್ದಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು