ರಾಜ್ಯದ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವು (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮಲೆನಾಡು ಜಿಲ್ಲೆ ಚಿಕ್ಕಮಗಳೂರು, ಉತ್ತರ ಒಳನಾಡಿನ ಕೆಲವು ಕಡೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ಹಲವು ಜಿಲ್ಲೆಗಳಲ್ಲಿ ನಿನ್ನೆ ಕೂಡ ಭರ್ಜರಿ ಮಳೆಯಾಗಿದೆ.
ವಿಜಯಪುರದಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ರಾತ್ರಿ ಸಂದರ್ಭದಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.